No menu items!
7.9 C
Munich
Wednesday, September 23, 2026

ಕೆಆರ್ ಸರ್ಕಲ್ನಲ್ಲಿ ಭೀಕರ ಸರಣಿ ಅಪಘಾತ: ಬಿಎಂಟಿಸಿ ಬಸ್ʼಗೆ ಟೆಂಪೋ ಡಿಕ್ಕಿ, ಚಾಲಕ ಸೇರಿ 14 ಮಂದಿಗೆ ಗಾಯ

Must read

ಕೆಆರ್ ಸರ್ಕಲ್ನಲ್ಲಿ ಭೀಕರ ಸರಣಿ ಅಪಘಾತ: ಬಿಎಂಟಿಸಿ ಬಸ್ʼಗೆ ಟೆಂಪೋ ಡಿಕ್ಕಿ, ಚಾಲಕ ಸೇರಿ 14 ಮಂದಿಗೆ ಗಾಯ

ಬೆಂಗಳೂರು: ನಗರದ ಕೆಆರ್ ಸರ್ಕಲ್ನಲ್ಲಿ ಸಿಗ್ನಲ್ ಬಳಿ ನಿಂತಿದ್ದ ಬಿಎಂಟಿಸಿ ಬಸ್ಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಎರಡು ಬಿಎಂಟಿಸಿ ಬಸ್ಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬಸ್ ಚಾಲಕ ಸೇರಿದಂತೆ 14 ಮಂದಿ ಗಾಯಗೊಂಡಿದ್ದಾರೆ.
ಅಪಘಾತದ ತೀವ್ರತೆಗೆ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡ 13 ಮಂದಿ ಪ್ರಯಾಣಿಕರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಒಬ್ಬ ಮಹಿಳೆಯ ಕಾಲು ಬಸ್ನ ಸೀಟಿನ ನಡುವೆ ಸಿಲುಕಿಕೊಂಡಿದ್ದು, ಸ್ಥಳದಲ್ಲೇ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಹಾರೆ ಮತ್ತು ಕಬ್ಬಿಣದ ಕೋಲುಗಳ ಸಹಾಯದಿಂದ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರಕ್ಷಣಾ ಕಾರ್ಯಾಚರಣೆ ನಡೆಸಿ ಮಹಿಳೆಯ ಕಾಲನ್ನು ಸುರಕ್ಷಿತವಾಗಿ ಹೊರತೆಗೆದರು. ಬಳಿಕ ಅವರನ್ನು ಆಂಬುಲೆನ್ಸ್ ಮೂಲಕ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಯಿತು.
ಅಪಘಾತದಲ್ಲಿ ಎರಡೂ ಬಿಎಂಟಿಸಿ ಬಸ್ಗಳು ತೀವ್ರವಾಗಿ ಜಖಂಗೊಂಡಿದ್ದು, ಕ್ರೇನ್ ಮೂಲಕ ಅವುಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿದಿದೆ.
ಘಟನೆಯ ಪರಿಣಾಮ ಕೆಆರ್ ಸರ್ಕಲ್ ಸುತ್ತಮುತ್ತ ಭಾರೀ ವಾಹನ ದಟ್ಟಣೆ ಉಂಟಾಗಿದ್ದು, ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿತು. ಪ್ರಕರಣ ದಾಖಲಿಸಿಕೊಂಡಿರುವ ಸಂಚಾರ ಪೊಲೀಸರು ಅಪಘಾತಕ್ಕೆ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ.

- Advertisement -spot_img

More articles

- Advertisement -spot_img

Latest article