No menu items!
5.3 C
Munich
Wednesday, September 23, 2026

ಏಳನೇ ಮಹಡಿಯಿಂದ ಬಿದ್ದು ಯುವತಿ ಸಾವು, ಯುವಕನಿಗೆ ಗಂಭೀರ ಗಾಯ

Must read

ಏಳನೇ ಮಹಡಿಯಿಂದ ಬಿದ್ದು ಯುವತಿ ಸಾವು, ಯುವಕನಿಗೆ ಗಂಭೀರ ಗಾಯ


ಬೆಂಗಳೂರು: ಏಳನೇ ಮಹಡಿಯಿಂದ ಬಿದ್ದು ಯುವಕ ಹಾಗೂ ಯುವತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯಲ್ಲಿ ಜನನಿ ಎಂಬ ಯುವತಿ ಸಾವನ್ನಪ್ಪಿದ್ದು, ವೃತ್ತಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದರು. ಯುವಕ ಮಾಣಿಕ್ಯ ವೇಲು ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಬದುಕಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ವೈಟ್‌ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರೂ ಏಳನೇ ಮಹಡಿಯಿಂದ ಬಿದ್ದಿರುವುದಕ್ಕೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.
ಘಟನೆಗೆ ಸಂಬಂಧಿಸಿದಂತೆ ವೈಟ್‌ಫೀಲ್ಡ್ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

- Advertisement -spot_img

More articles

- Advertisement -spot_img

Latest article