No menu items!
9.5 C
Munich
Sunday, October 11, 2026

ಬೆಳಗಿನ ಜಾವ ಭೀಕರ ಬೈಕ್ ಅಪಘಾತ; ಅಂಗಡಿ ಗೋಡೆಗೆ ರಾಯಲ್ ಎನ್ʼಫೀಲ್ಡ್ ಡಿಕ್ಕಿ, ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

Must read

ಬೆಳಗಿನ ಜಾವ ಭೀಕರ ಬೈಕ್ ಅಪಘಾತ; ಅಂಗಡಿ ಗೋಡೆಗೆ ರಾಯಲ್ ಎನ್ʼಫೀಲ್ಡ್ ಡಿಕ್ಕಿ, ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

ಬೆಂಗಳೂರು: ಯಲಹಂಕದ ರಾಜಾನುಕುಂಟೆ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ರಾಯಲ್ ಎನ್ಫೀಲ್ಡ್ ಬೈಕ್ವೊಂದು ಅಂಗಡಿಯ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಮೃತರನ್ನು ವಚನ್ ಹಾಗೂ ಪ್ರದೀಪ್ ಎಂದು ಗುರುತಿಸಲಾಗಿದೆ. ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಈ ಅಪಘಾತ ಸಂಭವಿಸಿದೆ. ಇಬ್ಬರು ವಿದ್ಯಾರ್ಥಿಗಳು ಬೆಳಗಿನ ಜಾವ ಬೈಕ್ನಲ್ಲಿ ಸುತ್ತಾಡಲು ಬಂದಿದ್ದ ವೇಳೆ ನಿಯಂತ್ರಣ ತಪ್ಪಿದ ಬೈಕ್ ಅಂಗಡಿಯ ಗೋಡೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಯಲಹಂಕ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.

- Advertisement -spot_img

More articles

- Advertisement -spot_img

Latest article