No menu items!
19.8 C
Munich
Saturday, August 1, 2026

ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ: ಬೆಂಜ್ ಕಾರು ಡಿವೈಡರ್ʼಗೆ ಡಿಕ್ಕಿಯಾಗಿ ಯುವತಿ ಸಾವು

Must read

ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ: ಬೆಂಜ್ ಕಾರು ಡಿವೈಡರ್ʼಗೆ ಡಿಕ್ಕಿಯಾಗಿ ಯುವತಿ ಸಾವು

ಬೆಂಗಳೂರು: ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಯುವತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಹೊಸಕೋಟೆ ಸಮೀಪದ ದೊಡ್ಡ ಹುಲ್ಲೂರು ಬಳಿ ಈ ದುರ್ಘಟನೆ ನಡೆದಿದ್ದು, ವೇಗವಾಗಿ ಸಂಚರಿಸುತ್ತಿದ್ದ ಬೆಂಜ್ ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.
ಕಾರು ಚಾಲಕನ ನಿರ್ಲಕ್ಷ್ಯ ಹಾಗೂ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದೆಂದು ಶಂಕಿಸಲಾಗುತ್ತಿದೆ. ಆದರೆ ಘಟನೆಯ ನಿಖರ ಕಾರಣ ತನಿಖೆಯ ಬಳಿಕವೇ ತಿಳಿಯಬೇಕಿದೆ.
ಅಪಘಾತ ಸಂಭವಿಸಿದ ತಕ್ಷಣ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಈ ಬೆಳವಣಿಗೆ ಪ್ರಕರಣಕ್ಕೆ ಮತ್ತಷ್ಟು ಕುತೂಹಲ ಹಾಗೂ ಅನುಮಾನಗಳಿಗೆ ಕಾರಣವಾಗಿದೆ.
ಘಟನಾ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಮೃತ ಯುವತಿಯ ಗುರುತು ಹಾಗೂ ಅಪಘಾತದ ಸಂಪೂರ್ಣ ಮಾಹಿತಿ ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ.

- Advertisement -spot_img

More articles

- Advertisement -spot_img

Latest article