No menu items!
25.3 C
Munich
Thursday, July 2, 2026

ಕ್ರಷರ್ ಬಂಡೆಯಲ್ಲಿ ಭೀಕರ ದುರಂತ: ಮೇಲಿಂದ ಬಂಡೆ ಬಿದ್ದು ಐವರು ಕಾರ್ಮಿಕರು ಸಾವು, ಇನ್ನಿಬ್ಬರು ಸಿಲುಕಿರುವ ಶಂಕೆ

Must read

ಕ್ರಷರ್ ಬಂಡೆಯಲ್ಲಿ ಭೀಕರ ದುರಂತ: ಮೇಲಿಂದ ಬಂಡೆ ಬಿದ್ದು ಐವರು ಕಾರ್ಮಿಕರು ಸಾವು, ಇನ್ನಿಬ್ಬರು ಸಿಲುಕಿರುವ ಶಂಕೆ

ರಾಮನಗರ: ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾದಪಟ್ಟಣ ಗ್ರಾಮದಲ್ಲಿರುವ ಕಾವೇರಿ ಕಂಪನಿಗೆ ಸೇರಿದ ಕ್ರಷರ್ ಬಂಡೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ದುರಂತದಲ್ಲಿ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನಿಬ್ಬರು ಕಾರ್ಮಿಕರು ಬಂಡೆಯಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಮಾಹಿತಿಯ ಪ್ರಕಾರ, ಇಂದು ಬೆಳಿಗ್ಗೆ ಕಾರ್ಮಿಕರು ಬಂಡೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ, ಮೇಲ್ಭಾಗದಲ್ಲಿ ಇಟಾಚಿ ಯಂತ್ರದ ಮೂಲಕ ಕಾರ್ಯಾಚರಣೆ ನಡೆಯುತ್ತಿತ್ತು. ಈ ವೇಳೆ ಮೇಲಿನಿಂದ ಬೃಹತ್ ಬಂಡೆಯೊಂದು ಜಾರಿ ಕೆಳಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ದುರಂತದ ಬಳಿಕ ಇನ್ನಿಬ್ಬರು ಕಾರ್ಮಿಕರು ಬಂಡೆಯಡಿ ಸಿಲುಕಿರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಸ್ಥಳಕ್ಕೆ ತಾವರೆಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುರಂತಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಮೃತರ ಗುರುತು ಹಾಗೂ ದುರಂತದ ನಿಖರ ಕಾರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

- Advertisement -spot_img

More articles

- Advertisement -spot_img

Latest article