ರಸ್ತೆ ಅಪಘಾತ: ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ – ಐವರು ಸಾವು!

tnit editors
0 Min Read

ಕಲಬುರಗಿ:- ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಮಿನಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹಬೂಬ್ ಸೇರಿ ಐವರು ಮೃತಪಟ್ಟಿದ್ದಾರೆ. ಮೃತಪಟ್ಟವರು ಬಾಗಲಕೋಟೆಯ ನವನಗರ ನಿವಾಸಿಗಳು. ಸ್ಥಳಕ್ಕೆ ನೆಲೋಗಿ ಠಾಣೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ.

ಕಲಬುರಗಿಯ ಖಾಜಾ ಬಂದೇನವಾಜ್​ ದರ್ಗಾಕ್ಕೆ ತೆರಳುವಾಗ ದುರಂತ ಸಂಭವಿಸಿದ್ದು, ಮಿನಿ ಬಸ್​​ನಲ್ಲಿದ್ದ ಒಟ್ಟು 31 ಜನರ ಪೈಕಿ ಐವರು ಸಾವನ್ನಪ್ಪಿದ್ದಾರೆ. 11 ಜನರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಕಲಬುರಗಿಯ ಜಿಮ್ಸ್​​ ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article