ರಸ್ತೆ ಅಪಘಾತ: ಬೈಕ್‌ಗೆ ಲಾರಿ ಡಿಕ್ಕಿಯಾಗಿ ಮೂವರು ದುರ್ಮರಣ
ರಾಮನಗರ:-ಬೈಕ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಗ್ರಾಮದ ಬಳಿ ಜರುಗಿದೆ.
39 ವರ್ಷದ ಗುರುಮೂರ್ತಿ, 45 ವರ್ಷದ ಶೇಖ್ ಆಸೀಫ್, 50 ವರ್ಷದ ವೆಂಕಟೇಶ್ ಮೃತ ದುರ್ದೈವಿಗಳು ಎನ್ನಲಾಗಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮತ್ತೋರ್ವ ಸಾವೀಗಿಡಾಗಿದ್ದಾನೆ.
ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.