ಏಜೆಂಟ್ ಟೀಸರ್ ಔಟ್ ಹೊಸ ಅವತಾರದಲ್ಲಿ ಅಖಿಲ್ ಅಕ್ಕಿನೇನಿ

Date:

ಟಾಲಿವುಡ್ ಚಿತ್ರರಂಗದ ಭರವಸೆ ನಾಯಕ ನಟ ಅಖಿಲ್ ಅಕ್ಕಿನೇನಿ ನಟನೆಯ ಮೋಸ್ಟ್ ಅವೇಟೇಡ್ ಏಜೆಂಟ್ ಸಿನಿಮಾದ ಟೀಸರ್ ರಿವೀಲ್ ಆಗಿದ್ದು, ಯೂಟ್ಯೂಬ್ ನಲ್ಲಿ ಸೆನ್ಸೇಷನಲ್ ಸೃಷ್ಟಿಸ್ತಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಶಿವ ಕಾರ್ತಿಕೇಯನ್ ಟೀಸರ್ ಝಲಕ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಸಾಥ್ ಕೊಟ್ಟಿದ್ದಾರೆ.

 

ಸಿಕ್ಸ್ ಪ್ಯಾಕ್ ಅವತಾರದಲ್ಲಿ ಸಖತ್ ಸ್ಟೈಲೀಶ್ ಲುಕ್ ನಲ್ಲಿ ಅಖಿಲ್ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದು, ಭರ್ಜರಿ ಆಕ್ಷನ್ ಧಮಾಕಾ ಟೀಸರ್ ನಲ್ಲಿದೆ. ಮಮ್ಮುಟ್ಟಿ ಅಮೋಘ ಅಭಿನಯ ನೋಡುಗರಿಗೆ ಥ್ರಿಲ್ ಕೊಡುತ್ತದೆ.

 

ಹೈ ಬಜೆಟ್‌ನಲ್ಲಿ ಮೂಡಿಬಂದಿರುವ ಏಜೆಂಟ್ ಸ್ಪೈ ಥ್ರಿಲ್ಲರ್ ಕಥಾಹಂದರ ಹೊಂದಿದ್ದು, ಸಾಕ್ಷಿ ವೈದ್ಯ ಅಖಿಲ್ ಗೆ ಜೋಡಿಯಾಗಿ ನಟಿಸಿದ್ದಾರೆ. ಸೈರಾ ನರಸಿಂಹ ರೆಡ್ಡಿ ಸಿನಿಮಾ ಖ್ಯಾತಿಯ ಸುರೇಂದ್ರ ರೆಡ್ಡಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ವಕ್ಕಂತಂ ವಂಶಿ ಕಥೆ ಬರೆದಿರುವ ಚಿತ್ರವನ್ನು ಎಕೆ ಎಂಟರ್‌ಟೈನ್‌ಮೆಂಟ್ಸ್ ಮತ್ತು ಸುರೇಂದರ್ 2 ಸಿನಿಮಾ ಬ್ಯಾನರ್ ನಡಿ ರಾಮಬ್ರಹ್ಮ ಸುಂಕರ ನಿರ್ಮಾಣ ಮಾಡಿದ್ದಾರೆ.

ಸೆನ್ಸೇಷನಲ್ ಮ್ಯೂಸಿಕ್ ಕಂಪೋಸರ್ ಹಿಪ್ ಹಾಪ್ ತಮಿಝಾ ಸಂಗೀತ, ರಸೂಲ್ ಎಲ್ಲೂರು ಕ್ಯಾಮೆರಾ, ರಾಷ್ಟ್ರ ಪ್ರಶಸ್ತಿ ವಿಜೇತ ನವೀನ್ ನೂಲಿ ಸಂಕಲನ, ಅವಿನಾಶ್ ಕೊಲ್ಲಾ ಕಲಾ ನಿರ್ದೇಶನ ಚಿತ್ರಕ್ಕಿದ್ದು, ಅಜಯ್ ಸುಂಕರ, ಪತಿ ದೀಪಾ ರೆಡ್ಡಿ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಈಗಾಗ್ಲೇ ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಟೀಸರ್ ರಿಲೀಸ್ ಮಾಡಿ ಪ್ರಚಾರ ಕಹಳೆ‌ ಮೊಳಗಿಸಿದೆ.

Share post:

Subscribe

spot_imgspot_img

Popular

More like this
Related

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...