ಭೂ ಕುಸಿತದ ಪರಿಣಾಮ ಕಳೆದೆರಡು ದಿನಗಳ ಹಿಂದೆ ಆಗುಂಬೆ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿತ್ತು. ಇಂದು ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ಉಡುಪಿಯಿಂದ ಶಿವಮೊಗ್ಗ-ಚಿಕ್ಕಮಗಳೂರು ಮಾರ್ಗವಾಗಿ ಬಸ್ ಸಂಚಾರ ಆರಂಭವಾಗಲಿದೆ. ಘಾಟ್ ನಲ್ಲಿ ತಾತ್ಕಾಲಿಕ ದುರಸ್ತಿ ಕಾರ್ಯ ನಡೆದಿದ್ದು, ಮರಳು ಚೀಲ, ಕಾಂಕ್ರೀಟ್ ಜಲ್ಲಿಪುಡಿ ಹಾಕಲಾಗಿದೆ. ಲಾರಿ, ಟಿಪ್ಪರ್ ನಂತಹ ಭಾರೀ ವಾಹನ ಸಂಚಾರ ನಿಷೇಧ ಮುಂದುವರೆದಿದ್ದು ಬಸ್ ಸಂಚಾರಕ್ಕೆ ಅನುಮತಿ ಸಿಕ್ಕಿದೆ.
ಭಾರೀ ಮಳೆಯಿಂದ ಆಗುಂಬೆ ಘಾಟ್ ನ 7ನೇ ತಿರುವಿನಲ್ಲಿ ಭೂ ಕುಸಿತ ಉಂಟಾಗಿತ್ತು. ಇದರಿಂದ ರಸ್ತೆ ಕುಸಿದು ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು.