AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಖರ್ಗೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸಾಮಾನ್ಯ ವಾರ್ಡ್‌ನಲ್ಲೇ ವೈದ್ಯಕೀಯ ನಿಗಾದಲ್ಲಿ ಇದ್ದಾರೆ.
ಮಂಗಳವಾರ ಬೆಳಗ್ಗೆ ಎಂದಿನಂತೆ ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸಿದ್ದ ಖರ್ಗೆ, ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಭಾರಿ ಪ್ರವಾಹ ಮತ್ತು ಬೆಳೆ ಹಾನಿ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಜೊತೆಗೆ, ಕಲ್ಯಾಣ ಕರ್ನಾಟಕದಲ್ಲಿ ಉಂಟಾದ ಪ್ರವಾಹ ಹಾಗೂ ಬೆಳೆ ಹಾನಿಗೆ ಪರಿಹಾರ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು.