No menu items!
12.7 C
Munich
Saturday, May 9, 2026

ಟೇಕಾಫ್ ಆದ 5 ನಿಮಿಷದಲ್ಲಿ ಪತನವಾದ ವಿಮಾನ: ಮೃತರ ಸಂಖ್ಯೆ 133ಕ್ಕೆ ಏರಿಕೆ..!

Must read

ಟೇಕಾಫ್ ಆದ 5 ನಿಮಿಷದಲ್ಲಿ ಪತನವಾದ ವಿಮಾನ: ಮೃತರ ಸಂಖ್ಯೆ 133ಕ್ಕೆ ಏರಿಕೆ..!

ಗುಜರಾತ್ನ ಅಹಮದಾಬಾದ್ನಲ್ಲಿ ವಿಮಾನ ಪತನಗೊಂಡಿದೆ. ಅಹಮದಾಬಾದ್ ಏರ್ಪೋರ್ಟ್ ಬಳಿ ಏಕಾಏಕಿ ವಿಮಾನ ಪತನಗೊಂಡ ಪರಿಣಾಮ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಏರ್ಪೋರ್ಟ್ ಬಳಿ ಮೇಧಿನಿ ನಗರ್ನಲ್ಲಿ ಈ ಘಟನೆ ಸಂಭವಿಸಿದೆ.
ಟೇಕ್ ಆಫ್ ಆಗುತ್ತಿದ್ದಂತೆ ವಿಮಾನ ಪತನವಾಗಿದೆ. ಏರ್ ಇಂಡಿಯಾ ವಿಮಾನದಲ್ಲಿ 242 ಪ್ರಯಾಣಿಕರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ವಿಮಾನದಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿ ಒಟ್ಟು 242 ಪ್ರಯಾಣಿಕರಿದ್ದರು.
ಅವರಲ್ಲಿ 230 ಪ್ರಯಾಣಿಕರು, 12 ಮಂದಿ ಸಿಬ್ಬಂದಿ ಇದ್ದರು. ಇವರಲ್ಲಿ ಒಟ್ಟು 133 ಮಂದಿ ಸಾವನ್ನಪ್ಪಿದ್ದಾರೆ ಎಂದು ಧೃಡಪಡಿಸಲಾಗಿದೆ. ಅಹಮದಾಬಾದ್ನಿಂದ ಮಧ್ಯಾಹ್ನ 3.38ಕ್ಕೆ ಹೊರಟ ವಿಮಾನವು ಬೋಯಿಂಗ್ 787-8 ವಿಮಾನದಲ್ಲಿ 242 ಪ್ರಯಾಣಿಕರು ಮತ್ತು ಸಿಬ್ಬಂದಿ ಇದ್ದರು. ಈ ಪೈಕಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, 1 ಕೆನಡಾ ಪ್ರಜೆ ಮತ್ತು 7 ಪೋರ್ಚುಗೀಸ್ ಪ್ರಜೆ ವಿಮಾನದಲ್ಲಿದ್ದರು.

- Advertisement -spot_img

More articles

- Advertisement -spot_img

Latest article