ಐಶ್ವರ್ಯಗೌಡಳಿಂದ ಬಹುಕೋಟಿ ವಂಚನೆ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾಗಲಿರುವ ಡಿ.ಕೆ. ಸುರೇಶ್
ಬೆಂಗಳೂರು: ಐಶ್ವರ್ಯಗೌಡಳಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಹಾಜರಾಗಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಏನಾದರೂ ಕಾರ್ಯ ಕರ್ತರು ಬಂದ್ರೆ ಅಹಿತಕತ ಘಟನೆ ನಡೆಯದಂತೆ ಭದ್ರತೆಗಾಗಿ ಸುಮಾರು 50 ಪೋಲಿಸರ ನಿಯೋಜನೆ ಮಾಡಲಾಗಿದೆ.
ಇಡಿ ಅಧಿಕಾರಿಗಳು ಜೂನ್ 19ರಂದು ಡಿ.ಕೆ.ಸುರೇಶ್ಗೆ ಇವತ್ತು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ನಾನು ಡಿ.ಕೆ. ಸುರೇಶ್ ಅವರ ತಂಗಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ ಕೋಟಿ ಕೋಟಿ ವಂಚನೆ ಮಾಡಿದ್ದಾಳೆ ಎಂಬ ಆರೋಪವಿದ್ದು,
ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿತ್ತು. ಐಶ್ವರ್ಯ ಗೌಡ ಜೊತೆಗೆ ಡಿ.ಕೆ.ಸುರೇಶ್ಗೆ ಆರ್ಥಿಕ ವ್ಯವಹಾರಗಳ ಸಂಬಂಧ ಇದೆಯಾ ಎಂಬ ಅನುಮಾನ EDಗೆ ಇದೆ. ಹೀಗಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.