No menu items!
24.4 C
Munich
Sunday, July 5, 2026

61ನೇ ವರ್ಷದಲ್ಲಿ 3ನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆಮಿರ್ ಖಾನ್!

Must read

61ನೇ ವರ್ಷದಲ್ಲಿ 3ನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆಮಿರ್ ಖಾನ್!

ಮುಂಬೈ: ಬಾಲಿವುಡ್‌ನ ‘ಮಿಸ್ಟರ್ ಪರ್ಫೆಕ್ಷನಿಸ್ಟ್’ ಆಮಿರ್ ಖಾನ್ ಹಾಗೂ ಬೆಂಗಳೂರಿನ ಗೌರಿ ಸ್ಪ್ರ್ಯಾಟ್ ಅಧಿಕೃತವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸುಮಾರು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ಈ ಜೋಡಿ, ಮುಂಬೈನ ಬಾಂದ್ರಾದಲ್ಲಿರುವ ಆಮಿರ್ ಖಾನ್ ನಿವಾಸದಲ್ಲಿ ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.

ಮದುವೆ ಸಮಾರಂಭದಲ್ಲಿ ಸುಮಾರು 150 ಮಂದಿ ಮಾತ್ರ ಭಾಗವಹಿಸಿದ್ದರು. ವಿದೇಶಗಳಿಂದ ಆಗಮಿಸಿದ್ದ ಬಂಧುಗಳು, ಆಪ್ತ ಸ್ನೇಹಿತರು ಹಾಗೂ ಸಿನಿಮಾ ಕ್ಷೇತ್ರದ ಆಯ್ದ ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿಯಾದರು. ಮದುವೆಯ ಬಳಿಕ ಇಬ್ಬರೂ ಅಗತ್ಯ ದಾಖಲೆಗಳಿಗೆ ಸಹಿ ಹಾಕಿ ತಮ್ಮ ವಿವಾಹವನ್ನು ಕಾನೂನುಬದ್ಧವಾಗಿ ನೋಂದಾಯಿಸಿಕೊಂಡರು.

ಆಮಿರ್ ಖಾನ್ ಮತ್ತು ಗೌರಿ ಸ್ಪ್ರ್ಯಾಟ್ ಸುಮಾರು 25 ವರ್ಷಗಳಿಂದ ಪರಿಚಯ ಹೊಂದಿದ್ದರೂ, ಕಳೆದ ಎರಡು ವರ್ಷಗಳ ಹಿಂದೆ ಅವರ ಸ್ನೇಹ ಪ್ರೀತಿಯಾಗಿ ಬದಲಾಗಿತ್ತು. ಕಳೆದ ವರ್ಷ ತಮ್ಮ 60ನೇ ಜನ್ಮದಿನದ ಸಂದರ್ಭದಲ್ಲಿ ಆಮಿರ್, ಗೌರಿಯನ್ನು ಮೊದಲ ಬಾರಿಗೆ ಸಾರ್ವಜನಿಕವಾಗಿ ಪರಿಚಯಿಸಿದ್ದರು. ಬಳಿಕ ಜೂನ್ 4ರಂದು ತಮ್ಮ ವಿವಾಹದ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದ್ದರು.

ಈ ಮದುವೆಯಲ್ಲಿ ಆಮಿರ್ ಅವರ ಮೂವರು ಮಕ್ಕಳಾದ ಜುನೈದ್, ಇರಾ ಮತ್ತು ಆಜಾದ್ ಭಾಗವಹಿಸಿದ್ದರು. ಗೌರಿ ಸ್ಪ್ರ್ಯಾಟ್ ಅವರ ಆರು ವರ್ಷದ ಮಗ ಕೂಡ ಸಮಾರಂಭದಲ್ಲಿ ಉಪಸ್ಥಿತರಿದ್ದನು. ಆಮಿರ್ ಖಾನ್ ಈ ಹಿಂದೆ ರೀನಾ ದತ್ತಾ ಹಾಗೂ ಕಿರಣ್ ರಾವ್ ಅವರನ್ನು ವಿವಾಹವಾಗಿದ್ದು, ಇದು ಅವರ ಮೂರನೇ ವಿವಾಹವಾಗಿದೆ.

ಮೂಲತಃ ಬೆಂಗಳೂರಿನವರಾದ ಗೌರಿ ಸ್ಪ್ರ್ಯಾಟ್, ನಗರದ ಬ್ಲೂ ಮೌಂಟೇನ್ಸ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದು, ಬಳಿಕ ಲಂಡನ್ ಯೂನಿವರ್ಸಿಟಿ ಆಫ್ ಆರ್ಟ್ಸ್‌ನಲ್ಲಿ ಫ್ಯಾಷನ್ ಸ್ಟೈಲಿಂಗ್ ಮತ್ತು ಫೋಟೋಗ್ರಫಿ ಅಭ್ಯಾಸ ಮಾಡಿದ್ದಾರೆ. ಪ್ರಸ್ತುತ ಅವರು ಮುಂಬೈನ ಬಿಬ್ಲಂಟ್ ಸಲೂನ್‌ನ ನಿರ್ವಹಣೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

- Advertisement -spot_img

More articles

- Advertisement -spot_img

Latest article