ಅಕ್ಷಿತ್ ಸಿನಿಮಾಗೆ ಡಾಲಿ ಧನಂಜಯ್ ಸಾಥ್..

Date:

ಹಿರಿಯ ನಟ ಶಶಿಕುಮಾರ್ ಪುತ್ರ ಅಕ್ಷಿತ್‌ ಶಶಿಕುಮಾರ್ ಅಭಿನಯದ ಹೊಸ ಸಿನಿಮಾಗೆ , ಡಾಲಿ ಧನಂಜಯ್ ಸಾಥ್ ಕೊಟ್ಟಿದ್ದಾರೆ. ಓ ಮೈ ಲವ್ ಚಿತ್ರದ ಬಳಿಕ ಅಕ್ಷಿತ್ ಖೆಯೊಸ್ ಎಂಬ ಹೊಸ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ ‌ ಈ ಚಿತ್ರದ ಫಸ್ಟ್ ಲುಕ್ ಗಣೇಶ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿದೆ. ನಟರಾಕ್ಷಸ ಡಾಲಿ ಧನಂಜಯ ಸಿನಿಮಾದ ಫಸ್ಟ್ ಲುಕ್ ಅನಾವರಣ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.


ವೃತ್ತಿಯಲ್ಲಿ ವೈದ್ಯರಾಗಿರುವ ಜಿ ವೆಂಕಟೇಶ್ ಪ್ರಸಾದ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಅಕ್ಷಿತ್ ಗೆ ಜೋಡಿಯಾಗಿ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ . ಇದೇ‌ ಮೊದಲ ಬಾರಿಗೆ ಶಶಿಕುಮಾರ್ ಹಾಗೂ ಅಕ್ಷಿತ್ ಶಶಿಕುಮಾರ್ ಒಟ್ಟಿಗೆ ತೆರೆಹಂಚಿಕೊಂಡಿದ್ದು, ಅಪ್ಪ-ಮಗನ ಜುಗಲ್ ಬಂದಿ ಹೇಗಿದೆ ಕಾದು ನೋಡಬೇಕು .


ಈಗಾಗಲೇ ಶೂಟಿಂಗ್ ಮುಗಿಸಿರುವ ಚಿತ್ರತಂಡ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಖೆಯೊಸ್ ಚಿತ್ರಕ್ಕೆ ವೆಂಕಟೇಶ್ ಪ್ರಸಾದ್ ಕಥೆ ಚಿತ್ರಕಥೆ ಸಂಭಾಷಣೆ ಬರೆದಿದ್ದಾರೆ. ಆಕ್ಷನ್ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಅಕ್ಷಿತ್ ಅದಿತಿ ವೈದ್ಯರಾಗಿ ನಟಿಸಿದ್ದಾರೆ.

ಸಿದ್ದು ಮೂಲಿಮನಿ, ಆರ್‌ಕೆ ಚಂದನ್ , ಶಿವಾನಂದ್ ಸಿಂದಗಿ, ಆರಾಧನಾ ಭಟ್ , ಮಿಮಿಕ್ರಿ ಗೋಪಿ ಮತ್ತು ನಾಗೇಂದ್ರ ಅರಸ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ದಿ ಬ್ಲಾಕ್ ಪೆಬಲ್ ಎಂಟರ್ ಟೈನ್ಮೆಂಟ್ ನಡಿ ಪಾರುಲ್ ಅಗರ್ವಾಲ್, ಹೇಮಚಂದ್ರ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ವಿಜಯ್ ಹರಿಟ್ಸ್ ಸಂಗೀತ, ಸಂದೀಪ್ ವಲ್ಲೂರಿ,ದುಲಿಪ್ ಕುಮಾರ್ ಛಾಯಾಗ್ರಾಹಣ, ನಾಗೇಂದ್ರ ಅರಸ್ ಸಂಕಲನ ಚಿತ್ರಕ್ಕಿದೆ.

Share post:

Subscribe

spot_imgspot_img

Popular

More like this
Related

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..?

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..? ಮನೆಯ ಅಂಗಳದಲ್ಲಿ ಬೆಳೆದ ತುಳಸಿ...

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...