ಕೇಂದ್ರ ಸಚಿವ ಅನಂತ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು (ಸೋಮವಾರ) ರಜೆ ಘೋಷಿಸಿದೆ.
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತ್ ಕುಮಾರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.
ಬಹು ಅಂಗಾಂಗ ವೈಪಲ್ಯಕ್ಕೆ ತುತ್ತಾಗಿದ್ದ ಇವರು ಬೆಂಗಳೂರಿನ ಚಾಮರಾಜಪೇಟೆಯ ಶಂಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಸಚಿವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕರ್ನಾಟಕದಾದ್ಯಂತ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿದೆ.