ಅಂಜನಾದ್ರಿ ಬೆಟ್ಟ ಸರ್ಕಾರದ ವಶಕ್ಕೆ….!

admin
By admin
1 Min Read

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಬಳಿಯ ಅಂಜನಾದ್ರಿ ಬೆಟ್ಟದಲ್ಲಿ ಪೂಜೆಯ ಹಕ್ಕಿನ ವಿವಾದದ ಬೆನ್ನಲ್ಲೇ ಜಿಲ್ಲಾಧಿಕಾರಿ ಎ. ಕನಗವಲ್ಲಿ ಸರ್ಕಾರದ ವಶಕ್ಕೆ ಪಡೆದಿದ್ದಾರೆ‌.

ಹನುಮಂತ ಹುಟ್ಟಿದ ಸ್ಥಳ ಎನ್ನಲಾದ ಅಂಜನಾದ್ರಿ ಬೆಟ್ಟವನ್ನು ಮುಜರಾಯಿ ಇಲಾಖೆಗೆ ಪಡೆದುಕೊಳ್ಳುವಂತೆ ಆದೇಶಿಸಿದ್ದಾರೆ‌. ಕಳೆದ ಎರಡು ವರ್ಷದಿಂದ ಪೂಜೆಯ ವಿವಾದಕ್ಕೆ ಸಂಬಂಧಿಸಿದಂತೆ ಈ ಹಿಂದಿನ ಅರ್ಚಕ ವಿದ್ಯಾದಾಸ ಬಾಬಾ ಹಾಗೂ ಸ್ಥಳೀಯ ಆಡಳಿತ ಮಂಡಳಿ ನಡುವೆ ಭಿನ್ನಾಭಿಪ್ರಾಯ ತಲೆದೂರಿತ್ತು. ಈ ಹಿನ್ನೆಲೆಯಲ್ಲಿ ಡಿಸಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
2016 ಮತ್ತು 2018 ರಲ್ಲಿ ಉಂಟಾಗಿದ್ದ ವಿವಾದದಿಂದ ಬೆಟ್ಟದಲ್ಲಿ ಕೋಮು ಗಲಭೆಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಧಕ್ಕೆ ಉಂಟಾಗಿದ್ದು, ಬೆಟ್ಟವನ್ನು ಸರ್ಕಾರದ ಸುಪರ್ದಿಗೆ ಪಡೆಯೋದು ಸೂಕ್ತ ಎಂದು ಜಿಲ್ಲಾಧಿಕಾರಿಗೆ ಎಸ್ ಪಿ ಅನೂಪ್ ಶೆಟ್ಟಿ ವರದಿ ಸಲ್ಲಿಸಿದ್ದರು.
ತಕ್ಷಣದಿಂದ ಜಾರಿಗೆ ಬರುವಂತೆ ಮಾಡಿ ದೇವಸ್ಥಾನವನ್ನು ವಶಕ್ಕೆ ಪಡೆಯುವಂತೆ ತಹಸೀಲ್ದಾರ್ ಚಂದ್ರಕಾಂತ್ ಅವರಿಗೆ ಜಿಲ್ಲಾಧಿಕಾರಿ ಎಂ ಕನಗವಲ್ಲಿ ಆದೇಶಿಸಿದ್ದಾರೆ.

Share This Article