ಬೆಂಗಳೂರು : ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಕುರಿತು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ಜರುಗಿದೆ.
ಸಭೆಯಲ್ಲಿ ಬೆಟ್ಟದ ಸಮಗ್ರ ಅಭಿವೃದ್ಧಿ ಬಗ್ಗೆ ವಿಸ್ತೃತ ಯೋಜನಾ ವರದಿಯನ್ನು ಕೂಡಲೇ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇದರೊಂದಿಗೆ ಬೆಟ್ಟದ ಬುಡದಲ್ಲಿ ಯಾತ್ರಿಕರಿಗೆ ಪಾರ್ಕಿಂಗ್ ಮತ್ತಿತರ ಮೂಲಸೌಕರ್ಯ ಒದಗಿಸುವ ಕಾಮಗಾರಿಗಳನ್ನು ಅನುಷ್ಠಾನಗೊಳಿಸಬೇಕು. ಯೋಜನೆಯ ಆರ್ಥಿಕ ಅನುಮೋದನೆಗಾಗಿ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸಭೆಯಲ್ಲಿ ಸಿಎಂ ಬೊಮ್ಮಾಯಿ ಸೂಚಿಸಿದರು. ಈ ಸಂದರ್ಭದಲ್ಲಿ ಆನಂದ್ ಸಿಂಗ್, ಹಾಲಪ್ಪ ಬಸಪ್ಪ ಆಚಾರ್, ಕೊಪ್ಪಳ ಸಂಸದ ಕರಡಿ ಸಂಗಣ್ಣ, ಜಿಲ್ಲೆಯ ಶಾಸಕರು, ಸರಕಾರದ ಹಿರಿಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.