No menu items!
7.9 C
Munich
Wednesday, September 23, 2026

ಮುಖ್ಯಮಂತ್ರಿ ಪಟ್ಟದ ಬಳಿಕ ಅಣ್ಣಮ್ಮ ದೇವಿ ದೇಗುಲಕ್ಕೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್

Must read

ಮುಖ್ಯಮಂತ್ರಿ ಪಟ್ಟದ ಬಳಿಕ ಅಣ್ಣಮ್ಮ ದೇವಿ ದೇಗುಲಕ್ಕೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇವರ ಮೇಲೆ ಅಪಾರ ಭಕ್ತಿ ಮತ್ತು ನಂಬಿಕೆ ಹೊಂದಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಪರಂಪರೆಯನ್ನು ಮುಂದುವರಿಸಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕವೂ ಅವರು ಕುಟುಂಬ ಸಮೇತರಾಗಿ ಹಲವು ದೇವಾಲಯಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆಯುತ್ತಿದ್ದಾರೆ.
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಕ್ಷಣ ಅಜ್ಜಯ್ಯನ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದ ಡಿ.ಕೆ. ಶಿವಕುಮಾರ್ ಅವರು, ಶುಕ್ರವಾರ ನಗರ ದೇವತೆ ಅಣ್ಣಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ತಮ್ಮ ಹರಕೆಯನ್ನು ತೀರಿಸಿದರು.
ಮುಖ್ಯಮಂತ್ರಿಯಾದರೆ ಅಣ್ಣಮ್ಮ ದೇವಿ ಸನ್ನಿಧಾನಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸುವುದಾಗಿ ಹರಕೆ ಹೊತ್ತಿದ್ದ ಡಿಕೆ ಶಿವಕುಮಾರ್ ಅವರು, ಅದರಂತೆ ದೇವಸ್ಥಾನಕ್ಕೆ ಆಗಮಿಸಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ದೇವಿಗೆ ಉಪ್ಪು ಹಾಗೂ ಮೊಸರು ಅರ್ಪಿಸಿ ರಾಜ್ಯದಲ್ಲಿ ಸುಖ, ಶಾಂತಿ ಮತ್ತು ನೆಮ್ಮದಿ ನೆಲೆಸುವಂತೆ ಪ್ರಾರ್ಥಿಸಿದರು.
ಪೂಜೆ ಬಳಿಕ ತಾಯಿ ಅಣ್ಣಮ್ಮ ದೇವಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಅವರು, ದೇವಸ್ಥಾನದಲ್ಲಿ ಕೆಲ ಕಾಲ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಿದರು. ಇದೇ ಸಂದರ್ಭದಲ್ಲಿ ಬಿಸಿಲು ಮಾರಮ್ಮ ದೇವಸ್ಥಾನಕ್ಕೂ ಭೇಟಿ ನೀಡಿದ ಮುಖ್ಯಮಂತ್ರಿ, ಅಲ್ಲಿ ಕೂಡ ಉಪ್ಪು ಮತ್ತು ಮೊಸರು ಅರ್ಪಿಸಿ ದೇವಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.

- Advertisement -spot_img

More articles

- Advertisement -spot_img

Latest article