No menu items!
8 C
Munich
Saturday, May 2, 2026

ಸಿಎಂ ಸಿದ್ದರಾಮಯ್ಯ ವಿರುದ್ದ ಅನುಪಮಾ ಶೆಣೈ ದೂರು..!

Must read

ಲಿಕ್ಕರ್ ಮಾಫಿಯಾದಲ್ಲಿ ಪ್ರಮುಖ ರಾಜಕೀಯ ನಾಯಕರ ಕೈವಾಡವಿದೆ ಎಂದು ಹೇಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಲ್ಲದೇ ಫೇಸ್ ಬುಕ್‍ನಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದ್ದ ಕೂಡ್ಲಿಗಿಯ ಮಾಜಿ ಡಿವೈಎಸ್‍ಪಿ ಅನುಪಮಾ ಶೆಣೈ ಅವರು ಈಗ ಮತ್ತೊಂದು ಸುದ್ದಿಯನ್ನು ಹೊತ್ತು ತಂದಿದ್ದಾರೆ. ವರ್ಗಾವಣೆ ವಿಚಾರವಾಗಿ ನನಗೆ ಅನ್ಯಾಯವಾಗಿದೆ ಎಂದು ಕೂಡ್ಲಿಗಿಯ ಹಿಂದಿನ ಡಿವೈಎಸ್‍ಪಿ ಅನುಪಮಾ ಶೆಣೈ ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರಿನ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಪನುಪಮಾ ಶೆಣೈ ಅವರು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಏಳು ಜನರ ಮೇಲೆ ದೂರು ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ, ಬಳ್ಳಾರಿ ಸಂಸದ ಶ್ರೀರಾಮುಲು, ಬಳ್ಳಾರಿ ಉಸ್ತುವಾರಿ ಸಚಿವರಾಗಿದ್ದ ಪರಮೇಶ್ವರ್ ನಾಯಕ್, ಡಿಜಿಪಿ ಓಂಪ್ರಕಾಶ್, ಎಸ್ಪಿ ಚೇತನ್ ಹಾಗೂ ಇನ್ನಿಬ್ಬರು ಅಧಿಕಾರಿಗಳು ಸೇರಿದಂತೆ ತನಗೆ ವರ್ಗಾವಣೆ ವಿಚಾರದಲ್ಲಿ ಅನ್ಯಾಯ ಮಾಡಿದ ಏಳು ಜನರ ವಿರುದ್ದ ದೂರು ನೀಡಿದ್ದೇನೆ ಎಂದಿದ್ದಾರೆ.
ಅನುಪಮಾ ಶೆಣೈ ನೀಡಿರುವ ದೂರನ್ನು ಪಡೆದಿರುವ ಹಲಸೂರು ಠಾಣೆ ಪೊಲೀಸರು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಳ್ಳಾರಿಯ ಬಿಜೆಪಿ ಸಂಸದ ಶ್ರೀರಾಮುಲು ಮೇಲೆ ನೀಡಿರುವ ದೂರನ್ನು ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಿದ್ದೇವೆ ಎಂದಿದ್ದಾರೆ.
ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಡಿವೈಎಸ್‍ಪಿಯಾಗಿ ಆಯ್ಕೆಯಾಗಿದ್ದ ಅನುಪಮಾ ಶೆಣೈ ಅವರನ್ನು 2016ರ ಜನವರಿಯಲ್ಲಿ ವಿಜಯಪುರದ ಡಿವೈಎಸ್‍ಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಇದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ನಾಯಕ್ ಅವರ ಫೋನ್ ಕರೆಯನ್ನು ಸ್ವೀಕರಿಸದ ಕಾರಣಕ್ಕಾಗಿ ವರ್ಗಾವಣೆ ಮಾಡಲಾಗಿದೆ ಎಂಬ ವಿವಾದ ಹಬ್ಬಿತ್ತು. ಹೀಗಾಗಿ ಅಮದು ಸಚಿವ ಪರಮೇಶ್ವರ್ ಅವರ ವಿರದ್ದ ಪ್ರತಿಭಟನೆಗಳು ನಡೆದಾಗ ಹಲವು ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಮತ್ತೆ ಅನುಪಮಾ ಅವರನ್ನು ಕೂಡ್ಲಿಗಿಗೆ ವರ್ಗಾವಣೆ ಮಾಡಿದ್ದರು. ಆದರೆ ಜೂನ್ 4ರಂದು ಅನುಪಮಾ ಶೆಣೈ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು ಮನವೊಲಿಕೆ ಪ್ರಯತ್ನ ವಿಫಲತೆಯಿಂದ ಸರ್ಕಾರ ರಾಜೀನಾಮೆಯನ್ನು ಅಂಗೀಕರಿಸಿತ್ತು.

Like us on Facebook  The New India Times

POPULAR  STORIES :

ನೀವು ಕುಡಿಯೋದು ಕೂಲ್‍ಡ್ರಿಂಕ್ಸ್ ಅಲ್ಲ ಬದಲಾಗಿ ವಿಷ..!

ಧೋನಿ ಚಿತ್ರದಲ್ಲಿ ಸ್ವಂತ ಅಣ್ಣನ ಪಾತ್ರವೇ ಇಲ್ಲ ಯಾಕೆ ಗೊತ್ತಾ..?

ಮತ್ತೊಂದು ಮದುವೆ ವದಂತಿ ಸುಳ್ಳು: ರಾಧಿಕಾ ಕುಮಾರ ಸ್ವಾಮಿ.

24ರ ಹರೆಯದ ಯುವತಿ 68ರ ತಾತನ ಅಚ್ಚರಿಯ ಜುಗಲ್‍ಬಂಧಿ…!

ಲೋಧಾ ಶಿಫಾರಸ್ಸು ಉಲ್ಲಂಘನೆ: 3ನೇ ಟೆಸ್ಟ್ ಪಂದ್ಯ ನಡೆಯೋದು ಬಹುತೇಕ ಡೌಟ್..?

ಪಾಕ್ ವಿರುದ್ದದ ಆನ್ಲೈನ್ ಅರ್ಜಿಯನ್ನು ಆರ್ಕೈವ್ ಪಟ್ಟಿಗೆ ಹಾಕಿ ತನ್ನ ದ್ವಂದ್ವ ನಿಲುವು ಪ್ರದರ್ಶಿದ ಅಮೇರಿಕಾ..!

ಚೆನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿರೋ ಜಯಲಲಿತಾ ಈಗ ಹೇಗಿದ್ದಾರೆ?

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article