ಬಿಡಿಎ ನಿವೇಶನ ಮಂಜೂರಾತಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ

Must read

ಬಿಡಿಎ ನಿಂದ ನಿವೇಶನ ಮಂಜೂರಾತಿಗಾಗಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಈ ಹಿಂದೆ ಶಾಸಕರೂ ಹಾಗೂ ಸಚಿವರುಗಳಿಗೆ ಬಿಡಿಎ ನಿವೇಶನಗಳನ್ನು ಹಂಚಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈ ಕೋರ್ಟ್​​ನಲ್ಲಿ ಸಲ್ಲಿಸಲಾಗಿತ್ತು. ಅರ್ಜಿಯ ಸಂಬಂಧ ಮಂಜೂರಾತಿ ಪಡೆದ ನಿವೇಶನದ ಕುರಿತು, ಪರಿಶೀಲಿಸಲು ಹೈ ಕೋರ್ಟ್ ನೇಮಿಸಿದ್ದ ನ್ಯಾಯಾಧೀಶ ಫಾರೂಖ್ ಸಮಿತಿ ಸಹ ಸ್ವಿಕರಿಸಿದೆ ಎಂದರು. ಬಿಡಿಎ ನಿಯಮಾವಳಿಗಳ ಅನುಸಾರವಾಗಿಯೇ ನನಗೆ ನಿವೇಶನ ಮಂಜೂರಾತಿಯಾಗಿದೆ. ಬಿಡಿಎ ನಿಂದ ನಿವೇಶನ ಮಂಜೂರಾತಿಗಾಗಿ ಯಾವುದೇ ಪ್ರಭಾವ ಅಥವಾ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಜಿ ಕೆಟಗರಿ ಅಡಿಯಲ್ಲಿ ಈ ಹಿಂದೆ ಇತರ ಶಾಸಕರೂ ಹಾಗೂ ಸಚಿವರು ಮಂಜೂರಾತಿ ಪಡೆದ ರೀತಿಯಲ್ಲಿಯೇ ನನಗೂ ಬಿಡಿಎ ನಿವೇಶನ ಮಂಜೂರಾಗಿದೆ ಎಂದು ಹೇಳಿದ್ದಾರೆ. ಪ್ರಸ್ತುತ ಬದಲಿ ನಿವೇಶನ ಮಂಜೂರು ಮಾಡಲು‌ ಬಿಡಿಎ ನಿಗದಿ ಪಡಿಸಿದ ಅಧಿಕ ಶುಲ್ಕವನ್ನೂ ಸಹ ಪಾವತಿಸಿದ್ದೇನೆ. ಈ ಹಿಂದೆ ನೂರಾರು ಮಂದಿ, ಬಿಡಿಎ ನಿಂದ ನಿವೇಶನ ಮಂಜೂರಾತಿ ಪಡೆದು ನೋಂದಣಿ ಶುಲ್ಕ ಕಟ್ಟಿದ್ದರೂ ನಿವೇಶನವನ್ನು ಪಡೆಯುವುದರಿಂದ ವಂಚಿತರಾಗಿದ್ದರು. ನಂತರ ನ್ಯಾಯಾಲಯದ ಆದೇಶದ ಮೇರೆಗೆ ಅವರಿಗೆ ಬಿಡಿಎ ಪರ್ಯಾಯ ನಿವೇಶನ ನೀಡಿ ಪರಿಹಾರ ಒದಗಿಸಿದೆ ಎಂದು ಮಾಹಿತಿ ನೀಡಿದರು.

- Advertisement -spot_img

More articles

- Advertisement -spot_img

Latest article