ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ವಿಡಿಯೋ ಹರಿದಾಡುತ್ತಿದ್ದು, ಈ ಬಗ್ಗೆ ನಾನು ಕ್ಷಮೆ ಕೇಳಲು ಸಿದ್ಧನಿದ್ದೇನೆ ಎಂದು ಅರವಿಂದ್ ಲಿಂಬಾವಳಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಕೆ ಕಾಂಗ್ರೆಸ್ ಕಾರ್ಯಕರ್ತೆ. ಒತ್ತುವರಿ ತೆರವು ಮಾಡುವಂತೆ ಹೇಳಿದ್ದಕ್ಕೆ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಅದರರ್ಥ ಕಾಂಗ್ರೆಸ್ ನವರು ಒತ್ತುವರಿಗೆ ಬೆಂಬಲ ನೀಡುತ್ತಿದ್ದಾರೆ ಎಂದು. ಮೊದಲು ಮಹಿಳೆ ಸರ್ಕಾರಿ ಜಾಗದಲ್ಲಿ ಅತಿಕ್ರಮಣ ಮಾಡಿದ್ದನ್ನು ತೆರವು ಮಾಡಲಿ ಎಂದರು. ಮಹಿಳೆ ನನ್ನ ಬಗ್ಗೆ ಏನಾದರೂ ಹೇಳಲಿ ಆದರೆ ಸರ್ಕಾರಿ ಜಾಗದಲ್ಲಿ ಅತಿಕ್ರಮಣ ಮಾಡಿರುವುದು ಸರಿಯಲ್ಲ. ಮೊದಲು ಸರ್ಕಾರಿ ಜಾಗ ತೆರವು ಮಾಡಲಿ ಎಂದು ಹೇಳಿದ್ದಾರೆ.