ಅಂಬೇಡ್ಕರ್ ಸಂವಿಧಾನವನ್ನು ಹೆಚ್ಚು ತಿದ್ದುಪಡಿ ಮಾಡಿದ್ದೇ ಕಾಂಗ್ರೆಸ್: ಆರ್ ಅಶೋಕ್ ಆರೋಪ
ಬೆಂಗಳೂರು: ಅಂಬೇಡ್ಕರ್ ಸಂವಿಧಾನವನ್ನು ಹೆಚ್ಚು ತಿದ್ದುಪಡಿ ಮಾಡಿದ್ದೇ ಕಾಂಗ್ರೆಸ್ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಪ್ರಜಾಪ್ರಭುತ್ವ ದಮನ ಮಾಡುತ್ತಿದೆ. ಅಂಬೇಡ್ಕರ್ ಸಂವಿಧಾನವನ್ನು ಹೆಚ್ಚು ತಿದ್ದುಪಡಿ ಮಾಡಿದ್ದೇ ಕಾಂಗ್ರೆಸ್. ಈಗ ಸರ್ಕಾರ, ರಾಜ್ಯಪಾಲರ ಹಲವು ಅಧಿಕಾರ ಮೊಟಕು ಮಾಡುತ್ತಿದೆ. ರಾಜ್ಯಪಾಲರಿಗೆ ಕಾಂಗ್ರೆಸ್ ಸರ್ಕಾರ ಅಪಮಾನ ಮಾಡುತ್ತಿದೆ ಎಂದು ಹೇಳಿದ್ದಾರೆ.
ಹಲವು ಮಸೂದೆಗಳ ವಿಚಾರದಲ್ಲಿ ರಾಜ್ಯಪಾಲರು ಕೇಳಿರುವುದಕ್ಕೆ ಸ್ಪಷ್ಟನೆ ಕೊಡದೇ ಬೊಬ್ಬೆ ಹಾಕುತ್ತಿದ್ದಾರೆ. ಗ್ಯಾರಂಟಿಗಳಿಂದ ಕಾಂಗ್ರೆಸ್ ಭಿಕ್ಷಾಪಾತ್ರೆ ಹಿಡಿಯುವ ಹಂತಕ್ಕೆ ಬಂದಿದೆ. ಯಾವ ರಾಜ್ಯಪಾಲರಿಗೆ ಅವಹೇಳನ ಮಾಡಿದ್ರೋ ಅದೇ ರಾಜ್ಯಪಾಲರಿಂದ ಇವತ್ತು ಸರ್ಕಾರವನ್ನು ಹೊಗಳಿಸಿಕೊಳ್ಳುತ್ತಿದ್ದಾರೆ. ಇವರಿಗೆ ನಾಚಿಕೆ ಆಗಬೇಕು ಎಂದು ಕಿಡಿಕಾರಿದ್ದಾರೆ.