No menu items!
5.3 C
Munich
Wednesday, September 23, 2026

ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್. ಅಶೋಕ್

Must read

ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್. ಅಶೋಕ್

ಬೆಂಗಳೂರು: ನಿರ್ಗಮಿತ ಸಚಿವ ಬಿ. ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಬಣ್ಣಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಪಕ್ಷ ನಾಯಕರು, ನಾಗೇಂದ್ರ ರಾಜೀನಾಮೆ ಪ್ರಕರಣದ ಕುರಿತು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿ ನಾಗೇಂದ್ರ ರಾಜೀನಾಮೆ ಪ್ರಕರಣ ಅಪರೂಪದ್ದು ಎಂದ ಅಶೋಕ್, ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ನಾಗೇಂದ್ರ ವಿಚಾರವನ್ನು ವಿಧಾನಸಭೆಯಲ್ಲಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿವೆ, ಜೆಡಿಎಸ್ ಬೆಂಬಲದೊಂದಿಗೆ ಬಿಜೆಪಿ ಹೋರಾಟ ನಡೆಸಿದ್ದು, ತಮ್ಮ ಗುರಿ ಆರಂಭದಿಂದಲೂ ಸ್ಪಷ್ಟವಾಗಿತ್ತು ಎಂದು ಹೇಳಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಅಕ್ರಮದ ಬಗ್ಗೆ ಚರ್ಚೆಯಾಗಿದ್ದು, ಇದೀಗ ಎರಡನೇ ಬಾರಿ ನಾಗೇಂದ್ರ ರಾಜೀನಾಮೆ ನೀಡುವಂತಾಗಿದೆ ಎಂದ ಅವರು, ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ನಾಗೇಂದ್ರ ಹೇಳಿದ್ದಾರೆ, ಹಾಗಾದರೆ ಪಕ್ಷವೇ ಲೂಟಿ ಮಾಡುವಂತೆ ಹೇಳಿಕೊಡುತ್ತದೆಯೇ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನಾಗೇಂದ್ರ ಅಮಾಯಕರು ಎಂದು ಹೇಳುತ್ತಿದ್ದಾರೆ ಎಂದ ಅಶೋಕ್, ಆದರೆ ತನಿಖಾ ಸಂಸ್ಥೆಗಳು ಪ್ರಕರಣದಲ್ಲಿ ಹಲವು ಆರೋಪಗಳನ್ನು ದಾಖಲಿಸಿವೆಯೆಂದೂ, ಇ.ಡಿ ನಾಲ್ಕು ಚಾರ್ಜ್ಶೀಟ್ಗಳನ್ನು ಸಲ್ಲಿಸಿದ್ದು, ಅವುಗಳಲ್ಲಿ ನಾಗೇಂದ್ರ ವಿರುದ್ಧ ಆರೋಪಗಳಿವೆ ಎಂದೂ ತಿಳಿಸಿದರು.

- Advertisement -spot_img

More articles

- Advertisement -spot_img

Latest article