ಪರಿಷ್ಕೃತ ಸಿಇಟಿ ರ‍್ಯಾಂಕಿಂಗ್ ಪಟ್ಟಿ ಬಿಡುಗಡೆ ಯಾವಾಗ ?

Date:

ಪರಿಷ್ಕೃತ ಸಿಇಟಿ ರ‍್ಯಾಂಕಿಂಗ್ ಪಟ್ಟಿಯನ್ನು ಇದೇ 29ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ್ ಹೇಳಿದ್ದಾರೆ. ಈ ಸಂಬಂಧ ಮಲ್ಲೇಶ್ವರದಲ್ಲಿ ಮಾತನಾಡಿದ ಸಚಿವರು, ವೃತಿಪರ ಕೋರ್ಸ್ ಗಳ ಸಿಇಟಿ ರ‍್ಯಾಂಕಿಂಗ್ ಗೆ ಸಂಬಂಧಿಸಿದಂತೆ ಉಂಟಾಗಿದ್ದ ಬಿಕ್ಕಟ್ಟನ್ನು ಬಗೆಹರಿಸಲು ರಾಜ್ಯ ಸರಕಾರ ನೇಮಿಸಿದ್ದ ಸಮಿತಿಯ ವರದಿಯನ್ನು ಹೈಕೋರ್ಟ್ ಒಪ್ಪಿಕೊಂಡಿದೆ. ಇದು ಸ್ವಾಗತಾರ್ಹವಾಗಿದ್ದು, ಪರಿಷ್ಕೃತ ಸಿಇಟಿ ರ‍್ಯಾಂಕಿಂಗ್ ಪಟ್ಟಿಯನ್ನು ಇದೇ 29ರಂದು ಬಿಡುಗಡೆ ಮಾಡಲಾಗುವುದು. ಸಮಸ್ಯೆಯನ್ನು ಬಗೆಹರಿಸಲು ಒಂದು ಸಮನ್ವಯ ಸೂತ್ರ ರೂಪಿಸುವಂತೆ ಸೂಚಿಸಿತ್ತು. ಅದರಂತೆ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ಬಿ. ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ ಐವರ ಸಮಿತಿ ರಚಿಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದೆವು. ನ್ಯಾಯಾಲಯವು ಸಮಿತಿ ಕೊಟ್ಟ ವರದಿಯನ್ನು ಪುರಸ್ಕರಿಸಿರುವುದು ಸಂತಸ ತಂದಿದೆ ಎಂದು ಸಚಿವರು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ!

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ! ಬೆಂಗಳೂರು:...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ ದಾವಣಗೆರೆ: ದಿವಂಗತ ಶಾಮನೂರು...

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಬಂಧನ

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ...

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..? 

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..?  ಇಂದಿನ ವೇಗದ...