No menu items!
6.1 C
Munich
Tuesday, May 12, 2026

ಅಸ್ಸಾಂ ಮುಖ್ಯಮಂತ್ರಿ ಆಗಿ ಹಿಮಂತ ಬಿಸ್ವಾ ಶರ್ಮಾ ಮತ್ತೊಮ್ಮೆ ಪ್ರಮಾಣವಚನ

Must read

ಅಸ್ಸಾಂ ಮುಖ್ಯಮಂತ್ರಿ ಆಗಿ ಹಿಮಂತ ಬಿಸ್ವಾ ಶರ್ಮಾ ಮತ್ತೊಮ್ಮೆ ಪ್ರಮಾಣವಚನ

ಅಸ್ಸಾಂ: ಬಿಜೆಪಿ ನಾಯಕ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ಅಸ್ಸಾಂ ರಾಜ್ಯದ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಪಾರ ಪ್ರದೇಶದ ಪಶುವೈದ್ಯಕೀಯ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರು ಶರ್ಮಾಗೆ ಪ್ರಮಾಣವಚನ ಬೋಧಿಸಿದರು.ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಸರ್ಬಾನಂದ ಸೋನೋವಾಲ್ ಹಾಗೂ ಪವಿತ್ರಾ ಮಾರ್ಗರಿಟಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಬಿಜೆಪಿ ಆಡಳಿತದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಮತ್ತು ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಕೂಡ ಸಮಾರಂಭದಲ್ಲಿ ಉಪಸ್ಥಿತರಿದ್ದರು.ಅಸ್ಸಾಂನಲ್ಲಿ ರಾಷ್ಟ್ರೀಯ ಜನತಾಂತ್ರಿಕ ಮೈತ್ರಿಕೂಟ (ಎನ್ಡಿಎ) ಸತತ ಮೂರನೇ ಬಾರಿ ಸರ್ಕಾರ ರಚನೆ ಮಾಡಿದ್ದು, ಈ ಬಾರಿ ಕೂಡ ಭರ್ಜರಿ ಬಹುಮತದೊಂದಿಗೆ ಅಧಿಕಾರ ಉಳಿಸಿಕೊಂಡಿದೆ.ಪ್ರಮಾಣವಚನ ಕಾರ್ಯಕ್ರಮಕ್ಕೆ ಹಿಮಂತ ಬಿಸ್ವಾ ಶರ್ಮಾ ಅವರ ತಾಯಿ ಮೃಣಾಲಿನಿ ದೇವಿ, ಪತ್ನಿ ರಿನಿಕಿ ಭೂಯಾನ್ ಶರ್ಮಾ, ಪುತ್ರ ನಂದಿಲ್ ಬಿಸ್ವಾ ಶರ್ಮಾ ಹಾಗೂ ಪುತ್ರಿ ಸುಕನ್ಯಾ ಶರ್ಮಾ ಸಾಕ್ಷಿಯಾದರು.126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಎನ್ಡಿಎ ಮೈತ್ರಿಕೂಟಕ್ಕೆ ಒಟ್ಟು 102 ಶಾಸಕರ ಬೆಂಬಲ ದೊರೆತಿದೆ. ಇದರಲ್ಲಿ ಬಿಜೆಪಿಯೇ 82 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.ಬಿಜೆಪಿಯ ಮಿತ್ರಪಕ್ಷಗಳಾದ ಅಸ್ಸಾಂ ಗಣ ಪರಿಷತ್ (ಎಜಿಪಿ) ಮತ್ತು ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) ತಲಾ 10 ಸ್ಥಾನಗಳನ್ನು ಪಡೆದು ಸರ್ಕಾರ ರಚನೆಗೆ ಬೆಂಬಲ ನೀಡಿವೆ.

- Advertisement -spot_img

More articles

- Advertisement -spot_img

Latest article