ತೀವ್ರ ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.
ಕಿಡ್ನಿ ವೈಪಲ್ಯ, ಉಸಿರಾಟದ ಸಮಸ್ಯೆ, ಮೂತ್ರನಾಳದ ತೊಂದರೆಯಿಂದ ಬಳಲುತ್ತಿರುವ ವಾಜಪೇಯಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ.