No menu items!
12.6 C
Munich
Thursday, September 10, 2026

ಕಾವೇರಿ ನೀರು ವಿವಾದ: ಆಗಸ್ಟ್ 13ರಂದು ರಾಜ್ಯ ಬಂದ್ ಘೋಷಿಸಿದ ಕನ್ನಡಪರ ಸಂಘಟನೆಗಳು

Must read

ಕಾವೇರಿ ನೀರು ವಿವಾದ: ಆಗಸ್ಟ್ 13ರಂದು ರಾಜ್ಯ ಬಂದ್ ಘೋಷಿಸಿದ ಕನ್ನಡಪರ ಸಂಘಟನೆಗಳು

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ವಿರೋಧಿಸಿ ರಾಜ್ಯದಲ್ಲಿ ನಡೆಯುತ್ತಿರುವ ರೈತರ ಹೋರಾಟ ಮತ್ತಷ್ಟು ತೀವ್ರಗೊಳ್ಳುತ್ತಿದೆ.
ಈ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಿವೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕನ್ನಡ ಒಕ್ಕೂಟಗಳ ಸಭೆ ನಡೆದ ಬಳಿಕ ಸುದ್ದಿಗೋಷ್ಠಿ ನಡೆಸಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಆಗಸ್ಟ್ 13ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಸಂಪೂರ್ಣ ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಘೋಷಿಸಿದರು.
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ರಕ್ಷಿಸಲು ಈ ಹೋರಾಟ ನಡೆಸಲಾಗುತ್ತಿದ್ದು, ರಾಜ್ಯದ ಎಲ್ಲಾ ಕನ್ನಡಪರ ಸಂಘಟನೆಗಳು, ಮಹಿಳಾ ಸಂಘಟನೆಗಳು ಹಾಗೂ ಸಾರಿಗೆ ಚಾಲಕರ ಸಂಘಗಳು ಬಂದ್ಗೆ ಬೆಂಬಲ ನೀಡಬೇಕು ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದರು.
ಕಾವೇರಿ ಜಲಾಶಯಗಳ ನೀರಿನ ಕೊರತೆ ನಡುವೆಯೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ನಿರ್ಧಾರವನ್ನು ವಿರೋಧಿಸಿ ರೈತ ಸಂಘಟನೆಗಳು ಹಾಗೂ ವಿವಿಧ ಕನ್ನಡಪರ ಸಂಘಟನೆಗಳು ಈಗಾಗಲೇ ಪ್ರತಿಭಟನೆ ನಡೆಸುತ್ತಿವೆ. ಇದೀಗ ರಾಜ್ಯ ಬಂದ್ ಕರೆ ಮೂಲಕ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಸಂಘಟನೆಗಳು ಮುಂದಾಗಿವೆ.

- Advertisement -spot_img

More articles

- Advertisement -spot_img

Latest article