ಆಯುಷ್ಮಾನ್ ಕಾರ್ಡ್ ಬಳಸಲು ಶೀಘ್ರವೇ ಸರಳೀಕೃತ ನಿಯಮಗಳನ್ನು ಜಾರಿಗೆ ತರಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣೆ, ಅವಶ್ಯಕತೆಯಿದ್ದಲ್ಲಿ ಶಸ್ತ್ರಚಿಕಿತ್ಸೆ, ಬಡವರಿಗೆ ಉಚಿತ ಕನ್ನಡಕ ನೀಡುವ ಕಾರ್ಯಕ್ರಮ ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. ಕಿವುಡರಿಗೆ ಕಾಕ್ಲಿಯರ್ ಇಂಪ್ಲಾಂಟ್ ವ್ಯವಸ್ಥೆಯನ್ನು ಬಡವರಿಗೆ ಉಚಿತವಾಗಿ ಪೂರೈಸಲಾಗುತ್ತಿದ್ದು, ಇದಕ್ಕಾಗಿ 500 ಕೋಟಿ ರೂ. ಮೀಸಲಿರಿಸಲಾಗಿದೆ. ಡಯಾಲಿಸಿಸ್ ಸೈಕಲ್ ಗಳನ್ನು 30 ಸಾವಿರಗಳಿಂದ 60 ಸಾವಿರಗಳನ್ನು ಹೆಚ್ಚಿಸಲಾಗಿದೆ. ಕಿಮೋಥೆರಪಿ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಆಯುಷ್ಮಾನ್ ಕಾರ್ಡ್ ಬಳಸಲು ಸರಳ ನಿಯಮಾವಳಿಗಳನ್ನು ಅತಿ ಶೀಘ್ರದಲ್ಲಿ ಹೊರಡಿಸಲಾಗುವುದು ಎಂದರು. ರೈತರಿಗೆ ಆರೋಗ್ಯ ಸೌಲಭ್ಯ ನೀಡುವ ‘ಯಶಸ್ವಿನಿ’ ಯೋಜನೆಯನ್ನು ನವೆಂಬರ್ 1 ರಂದು ಚಾಲನೆಗೊಳಿಸಲಾಗುವುದು. ಹೀಗೆ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಕಾಳಜಿ ವಹಿಸಲಾಗಿದೆ. ಪೌಷ್ಟಿಕ ಆಹಾರ ಪೂರೈಸುವ ಜೊತೆಗೆ 4000 ಅಂಗನವಾಡಿಗಳ ಸ್ಥಾಪನೆಗೆ ಕ್ರಮ ವಹಿಸಲಾಗುತ್ತಿದೆ. ಉತ್ತಮ ಆರೋಗ್ಯಕ್ಕೆ ಸ್ವಚ್ಛತೆ ಬಹಳ ಮುಖ್ಯ. ಮುಂದಿನ ಆಗಸ್ಟ್ 15 ರೊಳಗೆ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.
ಆಯುಷ್ಮಾನ್ ಕಾರ್ಡ್ ಗೆ ಸರಳ ನಿಯಮಗಳ ಜಾರಿಗೆ ನಿರ್ಧಾರ
Date: