ವಂದೇ ಭಾರತ್ ಹೈ ಸ್ಪೀಡ್ ಎಕ್ಸ್ ಪ್ರೆಸ್ ರೈಲು ಸೇವೆ ಯಾವಾಗ ಆರಂಭ ?

Date:

ಬೆಂಗಳೂರು- ಹುಬ್ಬಳ್ಳಿ ನಡುವೆ ವಂದೇ ಭಾರತ್ ಹೈ ಸ್ಪೀಡ್ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಮುಂದಿನ ವರ್ಷ ಮಾರ್ಚ್ ಹೊತ್ತಿಗೆ ಆರಂಭಿಸಲಾಗುತ್ತದೆ ಎಂದು ರಾಜ್ಯ ಬಿಜೆಪಿಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಭಾರತೀಯ ರೈಲ್ವೆಯನ್ನು ಹಿಂದೆಂದೂ ಕಾಣದ ರೀತಿಯಲ್ಲಿ ಅಭಿವೃದ್ಧಿಗೊಳಿಸಲು ಪ್ರಧಾನಿ ನರೇಂದ್ರ ಮೋದಿಯವರು ಬದ್ಧರಾಗಿದ್ದಾರೆ. ಅವರ ಆ ಪ್ರಯತ್ನದ ಭಾಗವಾಗಿ ಈ ಸೇವೆಯು ರಾಜ್ಯದ ಜನತೆಗೆ ಲಭ್ಯವಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಇನ್ನೂ ವಾಣಿಜ್ಯ ಕೇಂದ್ರವಾದ ಹುಬ್ಬಳ್ಳಿಗೂ ಬೆಂಗಳೂರಿಗೂ ತ್ವರಿತ ಪ್ರಯಾಣ ಸೇವೆಯನ್ನು ಒದಗಿಸುವುದು ರಾಜ್ಯದ ಅಭಿವೃದ್ಧಿಯ ದೃಷ್ಟಿಯಲ್ಲಿ ಮಹತ್ವವಾದದ್ದು ಎಂಬುದನ್ನು ರಾಜ್ಯ ಸರ್ಕಾರ ಮನಗಂಡಿದೆ. ಈ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರು ಎರಡೂ ನಗರಗಳ ನಡುವೆ ಹೈ ಸ್ಪೀಡ್ ರೈಲು ಕಾರಿಡಾರ್ ಅನ್ನು ನಿರ್ಮಾಣ ಮಾಡುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾಪನೆ ಸಲ್ಲಿಸಿದ್ದರು.

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...