2023 ಕ್ಕೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ

Date:

ಭಾರತೀಯ ಜನತಾ ಪಕ್ಷ ಮತ್ತೊಮ್ಮೆ 2023 ರ ಚುನಾವಣೆಯಲ್ಲಿ ವಿಜಯಶಾಲಿಯಾಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಆರ್ ಟಿ ನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ನಿರಂತರವಾಗಿ ಕಾರ್ಯಕ್ರಮಗಳನ್ನು ಮಾಡಿಕೊಂಡಿ ಬಂದಿದೆ. ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಜನಸಂಕಲ್ಪ ಯಾತ್ರೆ ಇಂದು ಪ್ರಾರಂಭವಾಗುತ್ತಿದೆ ಎಂದರು. ರಾಜ್ಯದಲ್ಲಿ ಬಿ.ಜೆ.ಪಿ.ಸರ್ಕಾರ ಮಾಡಿರುವ ಕಾರ್ಯಕ್ರಮಗಳು, ನೀತಿಗಳು ಮತ್ತು ಕೇಂದ್ರ ಸರ್ಕಾರದ ಕಾರ್ಯಕ್ರಮಗಳಿಂದಾಗಿ ಒಂದೊಂದು ಕ್ಷೇತ್ರದ ಸಾವಿರಾರು ಜನರಿಗೆ ಅನುಕೂಲವಾಗಿದೆ. ಅದನ್ನು ಜನಕ್ಕೆ ತಿಳಿಹೇಳಿ ಮುಂಬರುವ ಕಾರ್ಯಕ್ರಮಗಳನ್ನು ಯಾವ ವರ್ಗಗಳಿಗೆ ರೂಪಿಸಿದೆ, ಯಾವ ರೀತಿ ಲಾಭಪಡೆಯಬೇಕೆಂಬ ತೀರ್ಮಾನಗಳನ್ನು ಜನರಿಗೆ ತಿಳಿಸಲಾಗುವುದು ಎಂದರು. ಇನ್ನೂ ಬಿ.ಜೆ.ಪಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಚುನಾವಣೆಗೆ ಸಜ್ಜಾಗಿ 2023 ರ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕೆಂಬ ಸಂಕಲ್ಪ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲೆಡೆ ಬಹಳಷ್ಟು ಉತ್ಸಾಹವಿದೆ. ಜನಸಂಕಲ್ಪ ಯಾತ್ರೆ ಮೂಲಕ ಜನರ ವಿಶ್ವಾಸವನ್ನು ಗಳಿಸಿಸಲಾಗುವುದು ಎಂದರು. ಸಮಾವೇಶದ ಜೊತೆ ಸ್ಥಳೀಯ ಕಾರ್ಯಕರ್ತರು ರೂಪಿಸಿದಂತೆ 2- 3 ಸಣ್ಣ ಪುಟ್ಟ ಕಾರ್ಯಕ್ರಮಗಳು ಇರಲಿವೆ. ಫಲಾನುಭವಿಗಳೊಂದಿಗೆ ಮಾತನಾಡುವುದು, ಬೇರೆ ಬೇರೆ ಕಡೆ ಭೇಟಿ ನೀಡುವುದು ಇರುತ್ತದೆ ಎಂದು ಸಿಎಂ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...