ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸದಸ್ಯೆ ಮಹದೇವಮ್ಮ ನಾಗರಾಜ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ವಾರ್ಡ್ ನಂಬರ್ 121 ಬಿನ್ನಿಪೇಟೆಯ ಸದಸ್ಯೆಯಾಗಿರೋ ಇವರು ಕುಟುಂಬ ಸಮೇತ ತಿರುಪತಿಗೆ ಹೋಗಿದ್ದರು. ಇಂದು ಮುಂಜಾನೆ ದರ್ಶನ ಮುಗಿಸಿ ವಾಪಾಸ್ಸಾಗುವಾಗ ಇವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.