ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಭಾರತದ ಕ್ರಿಕೆಟ್ ಸಂಸ್ಥೆ ಬಿಸಿಸಿಐನ ಕೇಂದ್ರ ಕಚೇರಿ ಮುಂಬೈನಿಂದ ಬೆಂಗಳೂರಿಗೆ ಶಿಫ್ಟ್ ಆಗೋ ಸಾಧ್ಯತೆ ಇದೆ.
ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ( ಎನ್ ಸಿಎ) ನಿರ್ಮಾಣಕ್ಕಾಗಿ ಬಿಸಿಸಿಐ ಗೆ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಭೂಮಿ ಮಂಜೂರು ಮಾಡಿದೆ.
ಬೆಂಗಳೂರಿನ ಹೊರವಲಯದಲ್ಲಿ 40 ಎಕರೆ ಭೂಮಿ ಬಿಸಿಸಿಐ ಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ದೊರೆತಿದ್ದು, ಈ ಜಾಗದಲ್ಲೇ ಬಿಸಿಸಿಐ ಕೇಂದ್ರ ಕಚೇರಿ ನಿರ್ಮಾಣ ಮಾಡಲು ಚಿಂತಿಸಿದೆ.
ಮುಂಬೈನಿಂದ ಬೆಂಗಳೂರಿಗೆ ಕಚೇರಿಯನ್ನು ವರ್ಗಾಯಿಸುವ ಬಗ್ಗೆ ಬಿಸಿಸಿಐ ಹಂಗಾಮಿ ಅಧ್ಯಕ್ಷ ಸಿ.ಕೆ ಖನ್ನಾ ಎಲ್ಲಾ ಸದಸ್ಯರಿಗೆ ಪತ್ರಬರೆದಿದ್ದು ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.