ಶಿಕ್ಷಕರ ಅಕ್ರಮ ನೇಮಕ ಪ್ರಕರಣ ಸಿಐಡಿ ತನಿಖೆಗೆ

Date:

ರಾಜ್ಯದಲ್ಲಿ 2015-2016 ನೇ ಸಾಲಿನಲ್ಲಿ ನಡೆದಿದ್ದ ಶಿಕ್ಷಕರ ಅಕ್ರಮ ನೇಮಕ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ವಿಧಾನಸೌಭೆಯಲ್ಲಿ ಮಾತನಾಡಿದ ಅವರು 2015-2016 ರಲ್ಲಿ ಇದಕ್ಕಿದ್ದಂತೆ ಯಾವುದೇ ಪರೀಕ್ಷೆ ನಡೆಸದೇ ಅಕ್ರಮವಾಗಿ ಕೆಲವು ಶಿಕ್ಷಕರನ್ನು ನೇಮಕ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಬೆಂಗಳೂರು ವಿಭಾಗದ 15 ಜನರು ಈ ರೀತಿ ನೇಮಕ ಆದೇಶ ಪಡೆದಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ರಾಜ್ಯಾದ್ಯಂತ ಈ ರೀತಿ ಘಟನೆ ನಡೆದಿದ್ದು, ಇದು ಸಮಾಜವೇ ತಲೆ ತಗ್ಗಿಸುವ ಪ್ರಕರಣ , ಈ ಬಗ್ಗೆ ಸಮಗ್ರ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಇನ್ನೂ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳನ್ನು 2012-13 ಮತ್ತು 2014-15ರಲ್ಲಿ ತಲಾ 5 ರಿಂದ 10 ಲಕ್ಷ ರೂ.ಗೆ ಮಾರಾಟ ಮಾಡಲಾಗಿದೆ ಎಂದು ಸಿಐಡಿ ತನಿಖೆಯಿಂದ ತಿಳಿದುಬಂದಿದೆ.

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...