Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು!

Date:

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು!

ಬೆಳಗಾವಿ: ತಹಶಿಲ್ದಾರ್ ಕಚೇರಿಯಲ್ಲಿ ಎಫ್‌ಡಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ರಿಸಾಲ್ದಾರ್ ಗಲ್ಲಿಯಲ್ಲಿರುವ ತಹಶಿಲ್ದಾರ್ ಆಫೀಸ್‌ನಲ್ಲಿ ನಡೆದಿದೆ. ರುದ್ರಣ್ಣ ಯಡವಣ್ಣನವರ ತಹಶಿಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರನಾಗಿದ್ದಾರೆ. ತಹಶೀಲ್ದಾರ್ ಬಸವರಾಜ ನಾಗರಾಳ ಕಚೇರಿಯಲ್ಲಿಯೇ ನೇಣು ಬಿಗಿದುಕೊಂಡಿದ್ದಾರೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಸರ್ಕಾರಿ ನೌಕರ ಆತ್ಮಹತ್ಯೆಗೆ ಶರಣಾಗುವ ಮುನ್ನ ರಾಜ್ಯ ಸರ್ಕಾರದ ಪ್ರಭಾವಿ ಸಚಿವರ ಆಪ್ತ ಸಹಾಯಕನಹೆಸರು ಬರೆದಿಟ್ಟಿದ್ದಾರೆ. ಬೆಳಗಾವಿಯ ತಹಶಿಲ್ದಾರ್ ಬಸವರಾಜ್ ನಾಗರಾಳ‌ ಚೇಂಬರ್‌ನಲ್ಲಿಯೇ ಕೆಲಸ ಮಾಡುತ್ತಿದ್ದ ಎಫ್‌ಡಿಸಿ ರುದ್ರಣ್ಣ ಯಡಣ್ಣವರ ಇದೇ ಬೆಳಗಾವಿ ಜಿಲ್ಲೆಯ ರಾಯಭಾಗ ಮೂಲದರಾಗಿದ್ದರು. ನೌಕರ ಬರೆದಿಟ್ಟಿದ್ದ ಡೆತ್ ನೋಟ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ತಹಶಿಲ್ದಾರ್, ಖಡೇಬಜಾರ್ ಪೊಲೀಸರ‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ ಯಾವುದೇ ಶುಭಕಾರ್ಯ ಆರಂಭಿಸುವ...