ಸ್ಕೂಟಿಗೆ ಕಾಂಕ್ರೀಟ್ ಲಾರಿ ಡಿಕ್ಕಿ ಹೊಡೆದು ಯುವತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಲಾಲ್ ಬಾಗ್ ಬಳಿ ನಡೆದಿದ್ದು, ಆಕೆಯ ಕಣ್ಣುಗಳನ್ನು ದಾನ ಮಾಡಲಾಗಿದೆ.
19 ವರ್ಷದ ಪ್ರೀತಿ ಮೃತೆ.
ಪ್ರೀತಿ ಸುರಾನ ಕಾಲೇಜ್ ನಲ್ಲಿ ಫ್ರಥಮ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು. ಇಂದು ಪ್ರೀತಿ ಮತ್ತು ಆಕೆಯ ಸಹೋದರಿ ಲಾವಣ್ಯ ಬೈಕಿನಲ್ಲಿ ಹೋಗುತ್ತಿದ್ದರು. ಲಾಲ್‍ಬಾಗ್ ಬಳಿ ಬರುತ್ತಿದ್ದಂತೆಯೇ ವೇಗವಾಗಿ ಬಂದ ಕಾಂಕ್ರೀಟ್ ಮಿಶ್ರಣ ಮಾಡುವ ಟ್ರಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪ್ರೀತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ಅಪಘಾತದಿಂದ 24 ವರ್ಷದ ಲಾವಣ್ಯಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೋಷಕರು ಅಪಘಾತದಲ್ಲಿ ಸಾವನ್ನಪ್ಪಿದ್ದ ಪ್ರೀತಿಯ ಕಣ್ಣುದಾನ ಮಾಡಿದ್ದಾರೆ. ಈ ಮೂಲಕ ಪ್ರೀತಿ ಸಾವಿನಲ್ಲೂ ಕಣ್ಣುದಾನ ಮಾಡಿದ್ದಾರೆ.