Bengaluru Stampede: ಮೃತರ ಕುಟುಂಬಗಳಿಗೆ 25 ಲಕ್ಷ ರೂಪಾಯಿ ಪರಿಹಾರ ಹೆಚ್ಚಳ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಎದುರು ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರ ಸಾವು ರಾಜ್ಯದ ಜನರ ಸಿಟ್ಟಿಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣವನ್ನು ತೆರೆದರೆ, ಒಂದೆಡೆ ಸೂತಕದ ಭಾವನೆ ನಮ್ಮನ್ನು ಅಪ್ಪಿಕೊಳ್ಳುತ್ತದೆ. ಮತ್ತೊಂದೆಡೆ,
ಇನ್ನೊಂದಿಷ್ಟು ಜನ ರಾಜ್ಯ ಸರ್ಕಾರದ ವಿರುದ್ಧದ ಟೀಕಾ ಪ್ರಹಾರ ಮುಂದುವರಿಸಿದ್ದು ಕಾಣಸಿಗುತ್ತದೆ. ಈ ನಡುವೆ, ಮೃತರ ಕುಟುಂಬಸ್ಥರಿಗೆ ಘೋಷಿಸಿದ್ದ ಪರಿಹಾರ ಮೊತ್ತವನ್ನು ತಲಾ 25 ಲಕ್ಷ ರೂಪಾಯಿಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಈ ಮೊದಲು ರಾಜ್ಯ ಸರ್ಕಾರ ತಲಾ 10 ಲಕ್ಷ ರೂಪಾಯಿ ಘೋಷಣೆ ಮಾಡಿತ್ತು. ಇದೀಗ ಈ ಪರಿಹಾರ ಧನವನ್ನು 25 ಲಕ್ಷ ರೂಪಾಯಿಗೆ ಏರಿಕೆ ಮಾಡಿದೆ. ಹಾಗೆಯೇ ಗಾಯಾಳುಗಳಿಗೂ ಉಚಿತ ಚಿಕಿತ್ಸೆ ನೀಡುವುದಾಗಿ ಸರ್ಕಾರ ಹೇಳಿತ್ತು.