ಸೆ.2 ಭಾರತ್ ಬಂದ್ ಹಿನ್ನಲೆ: ಸರ್ಕಾರಿ ಬಸ್ ಕೂಡ ಸ್ಥಗಿತ..!

Date:

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮುಂದಿನ ತಿಂಗಳ ಸೆಪ್ಟಂಬರ್ 2 ರಂದು 10ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು ಭಾರತ್ ಬಂದ್‍ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ರಾಜ್ಯ ಸಾರಿಗೆ ಸಂಸ್ಥೆಗಳೂ ಕೈ ಜೋಡಿಸಿದ್ದು, ಒಂದು ದಿನಗಳ ಕಾಲ ಸಾರಿಗೆ ಮುಷ್ಕರಕ್ಕೆ ಮುಂದಾಗಿದೆ. ಕಾರ್ಮಿಕರ ಒಟ್ಟು 12 ಅಂಶಗಳ ಬೇಡಿಕೆಯನ್ನು ಈಡೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದು, ಅದಕ್ಕೆ ಕೇಂದ್ರ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಇಲ್ಲದ ಕಾರಣ ಸೆಪ್ಟೆಂಬರ್ 2ರಂದು ದೇಶದಾದ್ಯಂತ ಬಂದ್‍ಗೆ ಕರೆ ನೀಡಿವೆ.
ಸರ್ಕಾರಿ ಬಸ್ ಸೇರಿದಂತೆ, ಆಟೋ ರಿಕ್ಷಾ, ಹಾಗೂ ಮೊಬೈಲ್ ಅಪ್ಲಿಕೇಷನ್ ಆಧಾರಿತ ಟ್ಯಾಕ್ಸಿಗಳೂ ಕೂಡ ಅಂದು ರಸ್ತೆಗಿಳಿಯೋದು ಡೌಟ್..! ಆದ್ದರಿಂದ ಸಾರ್ವಜನಿಕರು ಅಂದು ಮನೆಯಿಂದ ಹೊರಡೋಕು ಮುನ್ನ ಎಚ್ಚರ ವಹಿಸಬೇಕಾಗಿದೆ.
ಸೆಪ್ಟೆಂಬರ್ 2 ರಂದು ರಾಷ್ಟ್ರವ್ಯಾಪ್ತಿ ಸಾಂಕೇತಿಕ ಮುಷ್ಕರ ನಡೆಸಲು 10ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು ನಿರ್ಧರಿಸಿವೆ ಎಂದು ಅಖಿಲ ಭಾರತ ಕಾರ್ಮಿಕ ಸಂಘದ ಕಾರ್ಯದರ್ಶಿ ಸಚ್‍ದೇವ್ ತಿಳಿಸಿದ್ದಾರೆ. ಕಾರ್ಮಿಕ ಹಕ್ಕುಗಳ ರಕ್ಷಣೆ, ಕೇಂದ್ರ ಸರ್ಕಾರದ ಕಾರ್ಮಿಕ ನೀತಿಯನ್ನು ವಿರೋಧಿಸಿ ಹಾಗೂ ಕಾರ್ಮಿಕರ ಪ್ರಮುಖ 17 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಲಾಗಿದೆ ಎಂದರು.
ಕೇವಲ ಬಸ್ ಟ್ಯಾಕ್ಸಿ ಸೇವೆ ಮಾತ್ರವಲ್ಲದೇ ಮೆಟ್ರೋ ಸಂಚಾರವೂ ಕೂಡ ಇರುವುದಿಲ್ಲ. ರೈಲು ಸಂಚಾರವೂ ಕೂಡ ಅನುಮಾನ ಎಂದು ಹೇಳಲಾಗಿದೆ. ಮೊಬೈಲ್ ಅಪ್ಲಿಕೇಷನ್ ಆಧಾರಿತ ಟ್ಯಾಕ್ಸಿಗಳೂ ಕೂಡ ಬಂದ್‍ಗೆ ಬೆಂಬಲ ಸೂಚಿಸಿವೆ. ಬಂದ್ ಬೆಂಬಲಿಸಿ ಅನೇಕ ಬ್ಯಾಂಕ್‍ಗಳು ಬೆಂಬಲ ನೀಡಿವೆ. ಆದರೆ ಈ ಮುಷ್ಕರಕ್ಕೆ ಆರ್‍ಎಸ್‍ಎಸ್ ಬೆಂಬಲಿತ ಮಜ್ದೂರ್ ಸಂಘಟನೆ ಹಿಂದೆ ಸರಿದಿದೆ.

POPULAR  STORIES :

ಪಬ್ಲಿಕ್ ಪ್ಲೇಸ್‍ನಲ್ಲೇ ಸೆಕ್ಸ್ ಮಾಡಿ ಸಿಕ್ಕಿಬಿದ್ದ ಹಾಲಿವುಡ್ ಸೆಲೆಬ್ರೆಟಿ…!

ಫೇಸ್‍ಬುಕ್‍ನಲ್ಲಿ ಲೈವ್ ಸಾಹಸ ಪ್ರದರ್ಶನ ತೋರಿಸಲು ಹೋಗಿ ಹೆಣವಾದ..!

ಈ ವೃದ್ದ ಸನ್ಯಾಸಿಯ ದೀರ್ಘಾಯುಷ್ಯದ ಸೀಕ್ರೇಟ್ ಏನು ಗೊತ್ತಾ…?

ನಿದ್ರೆ ಬಿಟ್ಟು ಜಿಯೋ 4ಜಿ ಫ್ರೀ ಸಿಮ್ ಪಡೆಯುತ್ತಿದ್ದಾರೆ ಗ್ರಾಹಕರು..!

ಟೆಸ್ಟ್ ನಲ್ಲಿ ಪಾಕ್ ನಂ1 ಪಟ್ಟ: ಕೋಹ್ಲಿಯನ್ನು ಲೇವಡಿ ಮಾಡಿದ ಪಾಕ್ ಅಭಿಮಾನಿಗಳು

ಬೆಳ್ಳಿತಾರೆ ಸಿಂಧು ಜೊತೆ ಜಾಹಿರಾತು ಒಪ್ಪಂದಕ್ಕಾಗಿ ಕಂಪನಿಗಳ ಪರೇಡ್..!

ಸುಲಭವಾಗಿ ಸಾಗಿಸಲು ಹೆಣದ ಮೂಳೆ ಮುರಿದು ಮುದ್ದೆ ಮಾಡಿದ್ದರು…!

ಲೈಫ್‍ನಲ್ಲಿ ಹೇಗೆ ಡಿಸಿಪ್ಲಿನ್ ಕಾಪಾಡೋದು,,? ಸ್ವಲ್ಪ ಜಪಾನಿಯರನ್ನ ನೋಡಿ..!

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...