No menu items!
12.1 C
Munich
Thursday, May 7, 2026

ಬಿಹಾರ ರಾಜಕೀಯಕ್ಕೆ ನಿಶಾಂತ್ ಕುಮಾರ್ ಎಂಟ್ರಿ; ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಪುತ್ರ

Must read

ಬಿಹಾರ ರಾಜಕೀಯಕ್ಕೆ ನಿಶಾಂತ್ ಕುಮಾರ್ ಎಂಟ್ರಿ; ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಪುತ್ರಪಾಟ್ನಾ: ಬಿಹಾರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಅಧಿಕೃತವಾಗಿ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸಿದ್ದಾರೆ.ಗುರುವಾರ ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್ಡಿಎ ಸರ್ಕಾರ ಸಚಿವ ಸಂಪುಟ ವಿಸ್ತರಣೆ ನಡೆಸಿತು. ಈ ಸಮಾರಂಭದ ಪ್ರಮುಖ ಆಕರ್ಷಣೆಯಾಗಿ ನಿಶಾಂತ್ ಕುಮಾರ್ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಬಿಹಾರ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸೈಯದ್ ಅತಾ ಹಸ್ನೈನ್ ಅವರು ನಿಶಾಂತ್ ಕುಮಾರ್ ಸೇರಿದಂತೆ ಒಟ್ಟು 31 ನಾಯಕರಿಗೆ ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.ಈ ಮಹತ್ವದ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಉಪಸ್ಥಿತರಿದ್ದು, ಎನ್ಡಿಎ ಮೈತ್ರಿಕೂಟದ ಬಲ ಪ್ರದರ್ಶನಕ್ಕೆ ಸಾಕ್ಷಿಯಾದರು.ಎನ್ಡಿಎ ಮೈತ್ರಿಕೂಟದ ಪ್ರಮುಖ ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಮುಂಬರುವ ಚುನಾವಣೆಗೆ ಒಗ್ಗಟ್ಟಿನ ಸಂದೇಶ ರವಾನಿಸಿದರು.ನೂತನ ಸಚಿವ ಸಂಪುಟದಲ್ಲಿ ಅನುಭವಿಗಳ ಜೊತೆಗೆ ಯುವ ನಾಯಕರಿಗೂ ಅವಕಾಶ ಕಲ್ಪಿಸಲಾಗಿದೆ. ಮಾಜಿ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ, ಹಿರಿಯ ನಾಯಕರುಗಳಾದ ಶ್ರಾವಣ್ ಕುಮಾರ್ ಮತ್ತು ಅಶೋಕ್ ಚೌಧರಿ ಮತ್ತೆ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.ಇದೇ ವೇಳೆ ಎನ್ಡಿಎ ಮೈತ್ರಿಕೂಟದ ಐದು ಪ್ರಮುಖ ಪಕ್ಷಗಳಾದ ಬಿಜೆಪಿ, ಜೆಡಿ(ಯು), ಎಲ್ಜೆಪಿ (ರಾಮ್ ವಿಲಾಸ್), ಹಿಂದುಸ್ತಾನಿ ಅವಾಮ್ ಮೋರ್ಚಾ (ಹ್ಯಾಮ್) ಮತ್ತು ಆರ್ಎಲ್ಎಂ ಪಕ್ಷಗಳ ನಾಯಕರಿಗೂ ಸಂಪುಟದಲ್ಲಿ ಸಮರ್ಪಕ ಪ್ರತಿನಿಧಿತ್ವ ನೀಡಲಾಗಿದೆ.ನಿತೀಶ್ ಕುಮಾರ್ ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಕಳೆದ ತಿಂಗಳು ಬಿಹಾರ ರಾಜಕೀಯದಲ್ಲಿ ಮಹತ್ವದ ಬದಲಾವಣೆ ನಡೆದಿತ್ತು. ಬಳಿಕ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.ಇದೀಗ ಸಚಿವ ಸಂಪುಟ ವಿಸ್ತರಣೆಯೊಂದಿಗೆ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಸಜ್ಜಾಗಿದ್ದು, ನಿಶಾಂತ್ ಕುಮಾರ್ ಅವರ ರಾಜಕೀಯ ಪ್ರವೇಶ ರಾಜ್ಯ ರಾಜಕೀಯದಲ್ಲಿ ಹೊಸ ಸಮೀಕರಣಗಳಿಗೆ ಕಾರಣವಾಗುವ ಸಾಧ್ಯತೆ ಇದೆ.

- Advertisement -spot_img

More articles

- Advertisement -spot_img

Latest article