ಬೈಕ್ ಟ್ಯಾಕ್ಸಿ ವಿರುದ್ಧ ಪೊಲೀಸರ ಕಾರ್ಯಾಚರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

Date:

ಬೈಕ್ ಟ್ಯಾಕ್ಸಿ ವಿರುದ್ಧ ಪೊಲೀಸರ ಕಾರ್ಯಾಚರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

ಬೆಂಗಳೂರು:- ಬೈಕ್ ಟ್ಯಾಕ್ಸಿ ವಿರುದ್ಧ ಪೊಲೀಸರ ಕಾರ್ಯಾಚರಣೆ ಕುರಿತಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ. ಸರ್ಕಾರದ ನಿಲುವು ಏನು ಎಂಬುದನ್ನು ಈಗಾಗಲೇ ನಾವು ಹೈಕೋರ್ಟ್​​ಗೆ ತಿಳಿಸಿದ್ದೇವೆ. ಕೊರಿಯರ್, ಪಾರ್ಸೆಲ್ ಹೆಸರಿನಲ್ಲಿ ಬೈಕ್ ಟ್ಯಾಕ್ಸಿಗಳು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ ದೊರೆತ ಕಾರಣ ನಮ್ಮ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದರು. ಬೈಕ್ ಟ್ಯಾಕ್ಸಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಲು ಹೈಕೋರ್ಟ್ ಆರು ವಾರಗಳ ಗಡುವು ನೀಡಿತ್ತು. ಈಗ ಆ ಅವಧಿ ಮುಗಿದು ಹೋಗಿದೆ. ಹೀಗಾಗಿ ನಮ್ಮ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಹೇಳಿದರು.

ಇನ್ನೂ ಉಬರ್ ಸೇರಿದಂತೆ ಕೆಲವು ಬೈಕ್ ಟ್ಯಾಕ್ಸಿಗಳು ಈ ಹಿಂದೆ ಕೂಡ ಪಾರ್ಸೆಲ್ ಸೇವೆ ಒದಗಿಸುತ್ತಿದ್ದವು. ಇದೀಗ ಹೈಕೋರ್ಟ್ ಆದೇಶದಂತೆ, ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಂಡ ಬೆನ್ನಲ್ಲೇ ಆ್ಯಪ್​ಗಳಲ್ಲಿ ‘ಬೈಕ್ ಟ್ಯಾಕ್ಸಿ’ ಎಂಬ ಆಯ್ಕೆ ಇದ್ದುದನ್ನು ‘ಪಾರ್ಸೆಲ್’ ಎಂದು ಬದಲಾಯಿಸಿವೆ. ಅಲ್ಲದೆ, ಪಾರ್ಸೆಲ್ ಸೇವೆ ಮುಂದುವರಿಸಿವೆ. ಆದರೆ, ಪಾರ್ಸೆಲ್ ಹೆಸರಿನಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಅಂಥ ಚಟುವಟಿಕೆಗಳ ಮೇಲೆ ಪೊಲೀಸರು ನಿಗಾ ಇಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...