ಬೈಕ್‍ಗೆ ಪೆಟ್ರೋಲ್ ತುಂಬಿಸಿಕೊಂಡು ಬೈಕ್ ಕಿಕ್ ಒಡೆದ ಸಂದಂರ್ಭದಲ್ಲಿ ಇದ್ದಕಿದ್ದ ಹಾಗೆ ಬೈಕ್‍ನಲ್ಲಿ ಬೆಂಕಿ ಹಾವರಿಸಿಕೊಂಡು ಕ್ಷಣಾರ್ಧದಲ್ಲೇ ಸುಟ್ಟು ಭಸ್ಮವಾದ ಘಟನೆ ಚಿಕ್ಕಬಳ್ಳಾಪುರ ನಗರದನ ಗೌರಿ ಬಿದನೂರಿನ ನಿಹಾನ್ ಪೆಟ್ರೋಲ್ ಬಂಕ್‍ನಲ್ಲಿ ನಡೆದಿದೆ.
ತಾಲ್ಲೂಕಿನ ಮೆಂಚೇನಳ್ಳಿ ಗ್ರಾಮದ ಮೆಕ್ಯಾನಿಕ್ ಆದ ಅಶೋಕ್ ತನ್ನ ಬೈಕ್‍ಗೆ ಪೆಟ್ರೋಲ್ ಹಾಕಿಸಿಕೊಂಡು ಬೈಕ್ ಕಿಕ್ ಹೊಡೆದಿದ್ದಾರೆ. ಈ ವೇಳೆ ಪೆಟೋಲ್ ಸೋರಿಕೆ ಕಂಡುಬಂದಿದ್ದು ಇದ್ದಕ್ಕಿದ್ದ ಹಾಗೆ ಬೈಕ್ ಹೊತ್ತಿಹುರಿಯಲು ಆರಂಭಿಸಿತು. ಬೆಂಕಿ ನಿಯಂತ್ರಿಸಲು ಸ್ಥಳೀಯರು ಎಷ್ಟೇ ಪ್ರಯತ್ನ ಪಟ್ಟರೂ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಮುನ್ನಚ್ಚರಿಕೆ ಕ್ರಮವಾಗಿ ಅಲ್ಲಿನ ಸಾರ್ವಜನಿಕರು ಬೈಕ್‍ನ್ನು ಪಂಪ್‍ಗೆ ಕಟ್ಟಿ ದೂರ ಎಳೆದುಕೊಂಡು ಹೋಗಿ ಸಮಯ ಪ್ರಜ್ಞೆ ಮೆರೆದಿದ್ದಾರೆ. ಬೈಕ್ ಸಂಪೂರ್ಣವಾಗಿ ಹೊತ್ತಿ ಉರಿದಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ವಾಹನ ಧಾವಿಸಿ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ.
POPULAR STORIES :
ಅತ್ಯಾಚಾರ ಮಾಡುವ ವಿಡಿಯೋ 50-100ರೂ ಗೆ ಬಿಕರಿ…!
ವಿರಾಟ್ ಕೊಹ್ಲಿಯ ಮನೆ ನೋಡಿದ್ರೆ ನೀವು ಶಾಕ್ ಆಗ್ತೀರಾ..!
ಪಲ್ಲವಿ ನೀನು ಹೀಗೆ ಮಾಡಬಾರದಿತ್ತವ್ವ.. ಹೋಗೋದು ಹೋದಿ.. ಜೊತೆಗೆ ಎಲ್ಲರ ನೆಮ್ಮದಿನ ಕಿತ್ಕೊಂಡೋದ್ಯಲ್ಲ..?
ರಿಯಾಲಿಟಿ ಶೋನಲ್ಲಿ ಸ್ಟಂಟ್ ಮಾಡಲು ಹೋಗಿ ಎಡವಟ್ಟು – Just Miss Video
ಕುಡಿದು ಡ್ರೈವಿಂಗ್ ಮಾಡಿದ್ರೆ 10 ಸಾವಿರ ರೂ ದಂಡ..! ಹೆಲ್ಮೆಟ್ ಧರಿಸದಿದ್ರೆ ಸಾವಿರ ರೂ.ದಂಡ..!
ಸಾಮಾಜಿಕ ಜಾಲತಾಣಗಳಲ್ಲಿ ರಾಕೇಶ್ ಸಿದ್ದರಾಮಯ್ಯಗೆ ನಿಂದನೆ : ಇಬ್ಬರ ವಿರುದ್ದ ಎಫ್‍ಐಆರ್ ದಾಖಲು
ಇನ್ಮುಂದೆ ಈಮೇಲ್ ಐಡಿಗಳು ನಮ್ಮ ದೇಶೀಯ ಭಾಷೆಗಳಲ್ಲಿ..! ಕನ್ನಡದಲ್ಲೂ ಈ ಮೇಲ್ ಐಡಿ ಕ್ರಿಯೇಟ್ ಮಾಡಬಹುದಂತೆ..!!