ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ ಶೋಧ
ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈರತಿ ಬಸವರಾಜ್ ಬಂಧನಕ್ಕಾಗಿ ಸಿಐಡಿ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿಯನ್ನು ಪತ್ತೆಹಚ್ಚಲು ನಾಲ್ಕು ವಿಶೇಷ ತಂಡಗಳನ್ನು ರಚಿಸಿ ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ.
ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿರುವ ಬೈರತಿ ಬಸವರಾಜ್‌ಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ ಉಂಟಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆ ಬಂಧನ ಪ್ರಕ್ರಿಯೆಗೆ ಸಿಐಡಿ ವೇಗ ನೀಡಿದೆ.
ಅಂತರ್‌ರಾಜ್ಯಗಳಿಗೆ ಸಹ ಸಿಐಡಿ ತಂಡಗಳು ತೆರಳಿ ಶೋಧ ಕಾರ್ಯ ನಡೆಸುತ್ತಿವೆ. ದೇವಸ್ಥಾನಗಳು ಹಾಗೂ ಬೈರತಿ ಆಪ್ತರ ಸಂಪರ್ಕಗಳ ಮೇಲೆ ಪೊಲೀಸರು ನಿಗಾ ವಹಿಸಿದ್ದಾರೆ. ಆರೋಪಿ ದೇಶ ಬಿಟ್ಟು ಹೋಗದಂತೆ ಪ್ರಮುಖ ಸ್ಥಳಗಳಲ್ಲಿ ಕಟ್ಟುನಿಟ್ಟಿನ ವೀಕ್ಷಣೆ ಕೈಗೊಳ್ಳಲಾಗಿದೆ.
ಹೊರರಾಜ್ಯದ ಪೊಲೀಸರೊಂದಿಗೆ ಸಹ ಸಿಐಡಿ ಅಧಿಕಾರಿಗಳು ಸಮನ್ವಯ ಸಾಧಿಸಿದ್ದು, ಯಾವುದೇ ಕ್ಷಣದಲ್ಲಿ ಬೈರತಿ ಬಸವರಾಜ್ ಬಂಧನವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.






