ಬಿಳಿಗಿರಿರಂಗನಾಥ ಸ್ವಾಮಿ ದೇವಸ್ಥಾನದ ಹುಂಡಿಯಲ್ಲಿ ಲಕ್ಷ ಲಕ್ಷ ದೇಣಿಗೆ

Date:

ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಬಿಳಿಗಿರಿರಂಗನಾಥ ಸ್ವಾಮಿ ದೇವಸ್ಥಾನದ ಹುಂಡಿಯಲ್ಲಿ ಕಳೆದ ಮೂರು ತಿಂಗಳ ಅವಧಿಯಲ್ಲಿ 37.74 ಲಕ್ಷ ರೂಪಾಯಿ ಸಂಗ್ರಹವಾಗಿದೆ. ಬೆಟ್ಟದ ದೇವಸ್ಥಾನದ ಆವರಣದಲ್ಲಿ ಬಿಗಿ ಭದ್ರತೆಯಲ್ಲಿ ಹುಂಡಿಗಳ ಎಣಿಕೆ ಕಾರ್ಯ ನಡೆಯಿತು.

ಬೆಳಗ್ಗೆಯಿಂದ ಸಂಜೆ ತನಕ ನಡೆದ ಹುಂಡಿ ಎಣಿಕೆಯಲ್ಲಿ 37,74,562 ರೂ. ಸಂಗ್ರಹವಾಗಿದೆ. ಇದರಲ್ಲಿ 35,79,577 ರೂ. ನೋಟುಗಳು ಹಾಗೂ 1,94,985 ರೂ.ನಾಣ್ಯಗಳ ರೂಪದಲ್ಲಿ ಭಕ್ತರು ಕಾಣಿಕೆ ಅರ್ಪಿಸಿದ್ದಾರೆ. ಅಲ್ಲದೇ 8 ವಿದೇಶಿ ಕರೆನ್ಸಿಗಳು ಸಹ ಹುಂಡಿ ಎಣಿಕೆ ವೇಳೆ ದೊರೆತಿವೆ.

ಕಳೆದ ಜೂನ್ 29ರಂದು ಹುಂಡಿಗಳ ಎಣಿಕೆ ಕಾರ್ಯ ನಡೆದಿತ್ತು. ಇನ್ನು ಹುಂಡಿ ಎಣಿಕೆ ವೇಳೆ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್ ಕುಮಾರ್ ಸೇರಿದಂತೆ ಯಳಂದೂರು ತಾಲೂಕು ಕಚೇರಿ ಸಿಬ್ಬಂದಿ ಹಾಗೂ ದೇವಸ್ಥಾನದ ನೌಕರರು ಭಾಗಿಯಾಗಿದ್ರು.

Share post:

Subscribe

spot_imgspot_img

Popular

More like this
Related

ಲವ್ ಮಾಕ್ಟೇಲ್ 3 ಟ್ರೈಲರ್ ಬಿಡುಗಡೆ: ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ

ಲವ್ ಮಾಕ್ಟೇಲ್ 3 ಟ್ರೈಲರ್ ಬಿಡುಗಡೆ: ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ ಬೆಂಗಳೂರು:...

ಇಂದು ಮೊದಲ ಬಾರಿಗೆ ಫೈನಲ್ʼನಲ್ಲಿ ಭಾರತ–ನ್ಯೂಜಿಲೆಂಡ್ ಮುಖಾಮುಖಿ!

ಇಂದು ಮೊದಲ ಬಾರಿಗೆ ಫೈನಲ್ʼನಲ್ಲಿ ಭಾರತ–ನ್ಯೂಜಿಲೆಂಡ್ ಮುಖಾಮುಖಿ! ಅಹಮದಾಬಾದ್: 2026ರ ಟಿ20 ವಿಶ್ವಕಪ್...

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...