No menu items!
12 C
Munich
Monday, April 20, 2026

ಬಿಟ್ ಕಾಯಿನ್ ಹೆಸರಲ್ಲಿ ಮೋಸ

Must read

ಬೆಂಗಳೂರು : ಬಿಟ್ ಕಾಯಿನ್ ಹೆಸರಲ್ಲಿ ಬೆಂಗಳೂರಿನ ಪ್ರತಿಷ್ಟಿತ ಕಾಲೇಜ್ ಒಂದರ ಯುವತಿಗೆ ಮೋಸ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ. ಬಿಟ್ ಕಾಯಿನ್ ಟ್ರೆಂಡಿಂಗ್ ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭಗಳಿಸಬಹುದು ಎಂದು ಇನ್ಸ್ಟಾಗ್ರಾಂ ಮೂಲಕ ಅಪರಿಚಿತ ವ್ಯಕ್ತಿ ಸಂದೇಶ ಕಳುಹಿಸಿ ಹಣದ ಆಮೀಷ ಒಡ್ಡಿದ್ದಾನೆ.

ಅಪರಿಚಿತ ವ್ಯಕ್ತಿ ಮೊದಲಿಗೆ ಬಿಟ್ ಕಾಯಿನ್ ಬಗ್ಗೆ ಸಾಕಷ್ಟು ಮಾಹಿತಿ ನೀಡಿದ್ದಾನೆ. ಇದನ್ನು ನಂಬಿ ಯುವತಿ ಹಂತಹಂತವಾಗಿ ಒಟ್ಟು 57 ಸಾವಿರಕ್ಕೂ ಅಧಿಕ ಹಣವನ್ನು ಆತನ ಅಕೌಂಟ್ ಗೆ ವಿದ್ಯಾರ್ಥಿನಿ ಹಣ ಸಂದಾಯ ಮಾಡಿದ್ದಾಳೆ. ಬಳಿಕ ಹಣ ವಾಪಸ್ ಬರದ ಹಿನ್ನೆಲೆ ವಿದ್ಯಾರ್ಥಿನಿ ಹಣ ವಾಪಸ್ ನೀಡುವಂತೆ ಕೇಳಿದ್ದಾಳೆ.

ಇದಕ್ಕೆ ಪ್ರತಿಕ್ರಿಯಿಸದ ಅಪರಿಚಿತ ವ್ಯಕ್ತಿಯ ವಿರುದ್ಧ ಬೆಂಗಳೂರಿನ ಕೇಂದ್ರ ವಿಭಾಗದ ಸಿಇಎನ್ ಠಾಣೆಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಆರೋಪಿಯ ಹುಡುಕಾಟಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article