ಟಿಪ್ಪು ಜಯಂತಿ ಆಚರಣೆಗೆ ರಾಜ್ಯಾದ್ಯಂತ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿದೆ. ಆದರೆ, ಬಳ್ಳಾರಿಯಲ್ಲಿ ಟಿಪ್ಪು ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಗೊಂದಲವಿದೆ..!
ಹೌದು, ಇದು ನಿಮಗೆ ಅಚ್ಚರಿ ಸುದ್ದಿ, ಬಿಜೆಪಿ ಪ್ರಮುಖ ನಾಯಕರಿಗೆ ಶಾಕಿಂಗ್ ನ್ಯೂಸ್…! ಒಂದೆಡೆ ಬಿಜೆಪಿಯಿಂದ ಟಿಪ್ಪು ಜಯಂತಿ ಆಚರಣೆಗೆ ವಿರೋಧವಿದ್ದರೆ, ಇನ್ನೊಂದೆಡೆ ಸ್ವತಃ ಬಿಜೆಪಿಯವರನ್ನು ತಮ್ಮ ಪಕ್ಷದ ಕಚೇರಿಯಲ್ಲೇ ಟಿಪ್ಪು ಜಯಂತಿ ಆಚರಿಸಿದ್ದಾರೆ ಎಂದು ತಿಳಿದುಬಂದಿದೆ..!
ಹೌದು ಬಳ್ಳಾರಿಯಲ್ಲಿ ಒಂದಿಷ್ಟು ಮಂದಿ ಬಿಜೆಪಿ ಕಾರ್ಯಕರ್ತರು ಟಿಪ್ಪು ಜಯಂತಿ ವಿರೋಧಿಸ್ತಿದ್ದಾರೆ. ಇನ್ನು ಒಂದಿಷ್ಟು ಕಾರ್ಯಕರ್ತರು ಪಕ್ಷದ ಕಚೇರಿಯಲ್ಲೇ ಟಿಪ್ಪು ಜಯಂತಿ ಆಚರಣೆ ಮಾಡಿದ್ದಾರಂತೆ..! ಮುಸ್ಲೀಂ ಮತವನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳಲು ಟಿಪ್ಪು ಜಯಂತಿ ಆಚರಿಸಿದ್ದಾರೆ ಎಂದು ಹೇಳಲಾಗ್ತಿದೆ.