No menu items!
7.9 C
Munich
Wednesday, September 23, 2026

ಯುವಕರಲ್ಲಿ ನಾಯಕತ್ವ ಮತ್ತು ಸೇವಾ ಮನೋಭಾವ ಬೆಳೆಸಲು ‘ಭಾರತ್ ಜೋಡೋ ಯುವ ಸಂಘ’ ಯೋಜನೆಗೆ ಚಾಲನೆ: ಡಾ.ಜಿ. ಪರಮೇಶ್ವರ್

Must read

ಯುವಕರಲ್ಲಿ ನಾಯಕತ್ವ ಮತ್ತು ಸೇವಾ ಮನೋಭಾವ ಬೆಳೆಸಲು ‘ಭಾರತ್ ಜೋಡೋ ಯುವ ಸಂಘ’ ಯೋಜನೆಗೆ ಚಾಲನೆ: ಡಾ.ಜಿ. ಪರಮೇಶ್ವರ್

ಬೆಂಗಳೂರು: ಯುವಕರಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯದಾದ್ಯಂತ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪ್ರತಿ ಸಂಘಕ್ಕೆ ₹10 ಲಕ್ಷ ಅನುದಾನ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೈಗೊಂಡಿದ್ದ ‘ಭಾರತ್ ಜೋಡೋ ಯಾತ್ರೆ’ಯ ನೆನಪಿಗಾಗಿ ವಿಶೇಷ ಕಾರ್ಯಕ್ರಮ ಜಾರಿಗೊಳಿಸುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರಸ್ತಾವನೆಯನ್ನು ಪರಿಶೀಲಿಸಿ, ಚರ್ಚೆಯ ಬಳಿಕ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಹೇಳಿದರು.
ಈ ಯೋಜನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೂಲಕ ಜಾರಿಗೊಳಿಸಲಾಗುವುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಈ ಯೋಜನೆಯ ಅನುಷ್ಠಾನಕ್ಕೆ ಸಹಕಾರ ನೀಡಲಿವೆ ಎಂದು ಅವರು ತಿಳಿಸಿದರು.
ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಥಳೀಯ ಮಟ್ಟದಲ್ಲಿ ‘ಭಾರತ್ ಜೋಡೋ ಯುವ ಸಂಘ’ಗಳನ್ನು ರಚಿಸಲು ಅಗತ್ಯ ಮಾರ್ಗಸೂಚಿಗಳನ್ನು ಜುಲೈ 13ರಂದು ಬಿಡುಗಡೆ ಮಾಡಲಾಗಿದೆ ಎಂದು ಡಾ. ಜಿ. ಪರಮೇಶ್ವರ್ ಮಾಹಿತಿ ನೀಡಿದರು.
ಯುವಕರನ್ನು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು, ನಾಯಕತ್ವ ಕೌಶಲ್ಯವನ್ನು ಬೆಳೆಸಲು ಹಾಗೂ ಸಾರ್ವಜನಿಕ ಸೇವಾ ಮನೋಭಾವವನ್ನು ಉತ್ತೇಜಿಸಲು ಈ ಯೋಜನೆ ಸಹಕಾರಿಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

- Advertisement -spot_img

More articles

- Advertisement -spot_img

Latest article