No menu items!
33 C
Munich
Friday, June 19, 2026

ವಿಧಾನಪರಿಷತ್ ಚುನಾವಣೆ: ಅಡ್ಡಮತದಾನ ತನಿಖೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ರಚನೆ

Must read

ವಿಧಾನಪರಿಷತ್ ಚುನಾವಣೆ: ಅಡ್ಡಮತದಾನ ತನಿಖೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ರಚನೆ

ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡಮತದಾನ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮೂರು ಸದಸ್ಯರ ಸತ್ಯಶೋಧನಾ ಸಮಿತಿಯನ್ನು ರಚಿಸಿದ್ದಾರೆ.
ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ವಾಸ್ತವಾಂಶ ಮತ್ತು ಸತ್ಯಾಸತ್ಯತೆ ಪರಿಶೀಲಿಸಲು ಸಿ.ಟಿ. ರವಿ, ಎನ್. ಮಹೇಶ್ ಹಾಗೂ ಮಹೇಶ್ ಟೆಂಗಿನಕಾಯಿ ಅವರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಜೂನ್ 25ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚನೆ ನೀಡಲಾಗಿದೆ.
ವಿಧಾನಪರಿಷತ್ ಚುನಾವಣೆಯ ಫಲಿತಾಂಶ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ಭಾರೀ ಆಘಾತ ನೀಡಿದೆ. ಕೆಲವು ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಅಡ್ಡಮತದಾನ ನಡೆಸಿರುವುದು ಮೈತ್ರಿ ನಾಯಕರಿಗೆ ತೀವ್ರ ಅಸಮಾಧಾನ ಉಂಟುಮಾಡಿದೆ. ಕಾಂಗ್ರೆಸ್ ಅಭ್ಯರ್ಥಿಗೆ ಒಟ್ಟು 11 ಮಂದಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಬೆಂಬಲ ನೀಡಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಬಿಜೆಪಿಯ ಕೆಲವು ಶಾಸಕರು ಪಕ್ಷದ ಅಧಿಕೃತ ಅಭ್ಯರ್ಥಿ ಲಿಂಗರಾಜ ಪಾಟೀಲ್ ಅವರಿಗೆ ಮತ ನೀಡದೇ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಚಲಾಯಿಸಿರುವುದು ಬೆಳಕಿಗೆ ಬಂದಿದೆ. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ನಾಯಕತ್ವ, ಅಡ್ಡಮತದಾನ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವ ಸೂಚನೆ ನೀಡಿದೆ.
ಈ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, “ಪಕ್ಷದಲ್ಲೇ ಇದ್ದು ದ್ರೋಹ ಮಾಡಿದವರ ಬಗ್ಗೆ ಹೈಕಮಾಂಡ್ಗೆ ಸಂಪೂರ್ಣ ಮಾಹಿತಿ ನೀಡುತ್ತೇನೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ನಿಶ್ಚಿತ” ಎಂದು ಎಚ್ಚರಿಕೆ ನೀಡಿದ್ದಾರೆ.
“ನಮ್ಮದು ರಾಷ್ಟ್ರೀಯ ಪಕ್ಷ. ಪಕ್ಷದ ಅಭ್ಯರ್ಥಿಯ ವಿರುದ್ಧ ಮತ ಹಾಕುವುದು ಪಕ್ಷದ ತತ್ವಗಳಿಗೆ ವಿರುದ್ಧ. ಪಕ್ಷದೊಳಗೆ ಕೆಲವು ಗೊಂದಲಗಳಿರುವುದು ಸತ್ಯ. ಆದರೆ ಬಿಜೆಪಿ ಚಿಹ್ನೆಯಡಿ ಆಯ್ಕೆಯಾದ ಶಾಸಕರೇ ಅಡ್ಡಮತದಾನ ಮಾಡಿರುವುದು ಅತ್ಯಂತ ಗಂಭೀರ ವಿಷಯ. ಇದಕ್ಕೆ ಸ್ಪಷ್ಟ ಗಡಿ ರೇಖೆ ಎಳೆಯಲೇಬೇಕು” ಎಂದು ವಿಜಯೇಂದ್ರ ಹೇಳಿದ್ದಾರೆ.
ರಾಷ್ಟ್ರೀಯ ನಾಯಕರ ಭೇಟಿಗೆ ಸಮಯ ಕೋರಿರುವುದಾಗಿ ತಿಳಿಸಿದ ಅವರು, “ಇಂದು ಅಥವಾ ಸೋಮವಾರ ಅವಕಾಶ ಸಿಕ್ಕ ತಕ್ಷಣ ದೆಹಲಿಗೆ ತೆರಳಿ ಅಡ್ಡಮತದಾನದ ಸಂಪೂರ್ಣ ಮಾಹಿತಿಯನ್ನು ವರಿಷ್ಠರ ಮುಂದೆ ಮಂಡಿಸುತ್ತೇನೆ” ಎಂದು ಹೇಳಿದ್ದಾರೆ.

- Advertisement -spot_img

More articles

- Advertisement -spot_img

Latest article