ಬಿಜೆಪಿ ನಾಯಕರ ಮನೆ ಮುಂದೆ ಯುವ ಕಾಂಗ್ರೆಸ್ ನಿಂದ ವಿವಾದಾತ್ಮಕ ಪೋಸ್ಟರ್ ಅಂಟಿಸಿ ಆಕ್ರೋಶ
ಬೆಂಗಳೂರಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಪೋಸ್ಟರ್ ವಾರ್ ಮತ್ತಷ್ಟು ತೀವ್ರಗೊಂಡಿದೆ. ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಮುಂದೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕರ್ತರು ವಿವಾದಾತ್ಮಕ ಪೋಸ್ಟರ್ಗಳನ್ನು ಅಂಟಿಸಿ ಪ್ರತಿಭಟನೆ ನಡೆಸಿದ್ದಾರೆ.
ಪೋಸ್ಟರ್ಗಳಲ್ಲಿ “ಕಾಂಗ್ರೆಸ್ನವರು ದೇಶಕ್ಕಾಗಿ ಹುಟ್ಟಿದವರು, ಬಿಜೆಪಿ ದ್ವೇಷಕ್ಕಾಗಿ ಹುಟ್ಟಿದವರು” ಎಂಬ ಘೋಷಣೆ ಬರೆಯಲಾಗಿದೆ. ಅಲ್ಲದೆ, ವಿಜಯೇಂದ್ರ ಅವರನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಪದಗಳನ್ನು ಬಳಸಿರುವ ಪೋಸ್ಟರ್ಗಳು ರಾಜಕೀಯ ವಿವಾದಕ್ಕೆ ಕಾರಣವಾಗಿವೆ.
ಈ ಬೆಳವಣಿಗೆಯಿಂದ ಬೆಂಗಳೂರಿನಲ್ಲಿ ಕಾಂಗ್ರೆಸ್-ಬಿಜೆಪಿ ನಡುವಿನ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು, ಎರಡೂ ಪಕ್ಷಗಳ ನಾಯಕರ ನಡುವೆ ವಾಕ್ಸಮರಕ್ಕೆ ವೇದಿಕೆಯಾಗಿದೆ.



