ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಫಿಕ್ಸ್

Must read

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಕಡೆಗೂ ಮುಹೂರ್ತ ನಿಗದಿಯಾಗಿದ್ದು, ಅಕ್ಟೋಬರ್ 7ರಂದು ನಗರದ ಅರಮನೆ ಮೈದಾನದಲ್ಲಿ ಕಾರ್ಯಕಾರಿಣಿ ಸಭೆ ನಡೆಯಲಿದೆ . ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆಹ್ವಾನ ನೀಡಲಾಗಿದ್ದು , ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸೇರಿದಂತೆ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರು ಭಾಗಿಯಾಗಲಿದ್ದಾರೆ. ಸಭೆಯ ಉದ್ಘಾಟನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಆಹ್ವಾನ ನೀಡಲಾಗಿದೆ. ಆದರೆ, ಅಮಿತ್ ಶಾ ಆಗಮಿಸುವ ಬಗ್ಗೆ ಇನ್ನೂ ರಾಜ್ಯ ನಾಯಕರಿಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

- Advertisement -spot_img

More articles

- Advertisement -spot_img

Latest article