ದೊಡ್ಡಬಳ್ಳಾಪುರದಲ್ಲೇ ಜನೋತ್ಸವ ಕಾರ್ಯಕ್ರಮ ನಡೆಯಲಿದ್ದು, ದಿನಾಂಕ ಇನ್ನೂ ಫೈನಲ್ ಆಗಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆ ಬಿಂಬಿಸಲು ಉದ್ದೇಶಿತ ರಾಜ್ಯಮಟ್ಟದ ಜನೋತ್ಸವ ಕಾರ್ಯಕ್ರಮ ದೊಡ್ಡಬಳ್ಳಾಪುರದಲ್ಲೇ ನಡೆಯಲಿದೆ.ಆದರೆ ದಿನಾಂಕ ಇನ್ನೂ ಫೈನಲ್ ಆಗಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರು ಸೇರಿಕೊಂಡು ಗುರುವಾರದೊಳಗೆ ದಿನಾಂಕ ಅಂತಿಮಗೊಳಿಸಲಿದ್ದಾರೆ. ತಾತ್ಕಾಲಿಕವಾಗಿ ಆ.28 ಎಂದು ನಿಗದಿಪಡಿಸಿದ್ದರೂ ಪಕ್ಷದ ರಾಷ್ಟ್ರೀಯ ನಾಯಕರು ನೀಡಲಿರುವ ಕಾಲಾವಕಾಶದ ಮೇಲೆ ದಿನಾಂಕ ಅಂತಿಮವಾಗಲಿದೆ ಎಂದು ಜನೋತ್ಸವ ಉಸ್ತುವಾರಿ ಜವಾಬ್ದಾರಿ ಹೊತ್ತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.