ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಟ್ವಿಟ್ ಪ್ರಹಾರ

Date:

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಕಿಡಿಕಾರಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ಸಿಎಂ ಆದ ಒಂದೇ ವರ್ಷಕ್ಕೆ ಅವರ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿತ್ತು. ಅರ್ಕಾವತಿ, ಕೆಪಿಎಸ್ಸಿ, ವಕ್ಫ್ ಆಸ್ತಿ ಕಬಳಿಕೆ, ಭೂ ಒತ್ತುವರಿ, ಸಿವಿಲ್ ಪೊಲೀಸ್ ನೇಮಕಾತಿ ಹಗರಣ ರಾರಾಜಿಸಿದ್ದವು.

ಕಾಂಗ್ರೆಸ್ ವಿರುದ್ಧ ಅಂದೇ ರಾಜ್ಯ ಬಿಜೆಪಿ ಘಟಕ ಧ್ವನಿ ಎತ್ತಿತ್ತು. ಸಿದ್ದರಾಮಯ್ಯ ಸ್ಮೃತಿಗೆ ಗರ ಬಡಿದಿದೆಯೇ ಎಂದು ಟ್ವೀಟ್ ಮಾಡಿದೆ. 2014ರ ಮಾ.22ರಂದು ಕೆಪಿಎಸ್​ಸಿ ನೇಮಕಾತಿ ಪಟ್ಟಿ ಬಿಡುಗಡೆ ಮಾಡಿತ್ತು. ಅಂದು ಸಂಜೆಯೇ ನೇಮಕಾತಿ ಹಿಂದಿನ ಕರ್ಮಕಾಂಡದ ಬಂಡವಾಳ ಹೊರಬಿತ್ತು. ಆ ಅಕ್ರಮದಲ್ಲಿ 7 ಮಂದಿಯಷ್ಟೇ ಭಾಗಿ ಎಂದು ತೇಪೆ ಹಚ್ಚಿದ್ರು. ಅದರ ಬೆನ್ನಲ್ಲೇ 362 ಹುದ್ದೆಗಳ ನೇಮಕ ರದ್ದುಗೊಳಿಸಲಿಲ್ಲವೇ? ಎಂದು ಪ್ರಶ್ನಿಸಿದೆ. ಇನ್ನೂ ಸಿದ್ದರಾಮಯ್ಯರು ಲೋಕಾಯುಕ್ತ ಸಮಾಧಿ ಮಾಡಿದ್ದಕ್ಕೆ ಬೆಟ್ಟದಷ್ಟು ಪುರಾವೆಗಳಿವೆ. ಬೊಮ್ಮಾಯಿ ಸರ್ಕಾರ ಎಲ್ಲವನ್ನೂ ಬಯಲಿಗೆ ಎಳೆಯಲಿದೆ. ಏರುಧ್ವನಿಯಲ್ಲಿ ಮಾತಾಡಿದ ಮಾತ್ರಕ್ಕೆ ಎಲ್ಲವೂ ಸತ್ಯವಾಗಲ್ಲ ಕರಪ್ಟ್​​ ಕಾಂಗ್ರೆಸ್​ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟರ್​ನಲ್ಲಿ ಕಿಡಿಕಾರಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...